Advertisement

ಬಿ.ಎಂ.ಟಿ.ಸಿ.ಯಲ್ಲಿ ಇನ್ನು ಮುಂದೆ  ಮೊಬೈಲ್ ಲೌಡ್ ಸ್ಪೀಕರ್ ಬಳಕೆಗೆ ನಿಷೇಧ

09:50 AM Sep 20, 2019 | Hari Prasad |

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಇನ್ನುಮುಂದೆ ಪ್ರಯಾಣಿಕರು ತಮ್ಮ ಮೊಬೈಲ್ ಗಳಲ್ಲಿ ಲೌಡ್ ಸ್ಪೀಕರ್ ಬಳಸಿ ಹಾಡು ಅಥವಾ ಇನ್ಯಾವುದೇ ಕಾರ್ಯಕ್ರಮಗಳನ್ನು ಕೇಳುವಂತಿಲ್ಲ. ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಮೊಬೈಲ್ ಮೂಲಕ ಜೋರಾಗಿ ಹಾಡುಗಳನ್ನು ಹಾಕುವುದು ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1986ರ ನಿಯಮ 94 (I) (V)ರ ಉಲ್ಲಂಘನೆಯಾಗಿರುತ್ತದೆ ಎಂದು ಸಂಸ್ಥೆ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

Advertisement

ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿನ್ನಲೆಯಲ್ಲಿ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಬಿಎಂಟಿಸಿ ಬಸ್ಸುಗಳಲ್ಲಿ ಮೊಬೈಲ್ ಲೌಡ್ ಸ್ಪೀಕರ್ ಬಳಕೆಯನ್ನು ನಿರ್ಬಂಧಿಸಿ ಸಂಸ್ಥೆಯು ಆದೇಶ ಹೊರಡಿಸಿದೆ.

ಈ ಕುರಿತು ಪ್ರಯಾಣಿಕರಿಗೆ ಮಾಹಿತಿಯನ್ನು ತಲುಪಿಸಲು ಸಾರ್ವಜನಿಕ ಸಂಪರ್ಕ ಅಧಿಕಾರಿಯವರು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು. ಮತ್ತು ಈ ಮಾಹಿತಿಯನ್ನು ಬಸ್ಸುಗಳಲ್ಲಿ ಪ್ರಯಾಣಿಸುವವರ ಗಮನಕ್ಕೆ ತರಲು ಬಿಎಂಟಿಸಿ ಬಸ್ಸುಗಳಲ್ಲಿ ಸೂಚನಾ ಸ್ಟಿಕ್ಕರ್ ಗಳನ್ನು ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆಯು ತನ್ನ ಪ್ರಕಟನೆಯಲ್ಲಿ ತಿಳಿಸಿದೆ. ಮತ್ತು ಈ ಸುತ್ತೋಲೆಯನ್ನು ಬಿಎಂಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬಂದಿಗಳ ಗಮನಕ್ಕೆ ತರಲು ಸಂಸ್ಥೆಯು ಸೂಕ್ತ ಕ್ರಮಕೈಗೊಳ್ಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next