ಬೆಂಗಳೂರು: ಒಂಟಿಯಾಗಿ ಓಡಾಡುವ ಸಾರ್ವಜನಿ ಕರನ್ನು ಹಿಂಬಾಲಿಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಎಂ.ಎಸ್.ಪಾಳ್ಯ ನಿವಾಸಿ ಶಾಬಾಜ್ ಖಾನ್ ಅಲಿಯಾಸ್ ಶಾಬು (24) ಮತ್ತು ಚಂದ್ರಾಲೇಔಟ್ ಗಂಗೊಂಡನ ಹಳ್ಳಿ ನಿವಾಸಿ ಮುಬಾರಕ್ ಅಲಿಯಾಸ್ ಕಾಲು(24) ಬಂಧಿತರು.
ಆರೋಪಿ ಗಳಿಂದ 2.15 ಲಕ್ಷ ರೂ. ಮೌಲ್ಯದ 11 ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಜೂನ್ 13ರಂದು ರಾತ್ರಿ 11 ಗಂಟೆ ಸುಮಾರಿಗೆ ಸುಮ್ಮನಹಳ್ಳಿ ಸರ್ಕಲ್ ಅಪಾರ್ಟ್‌ಮೆಂಟ್ ನಿವಾಸಿ ಶಿವಕುಮಾರ್ ಎಂಬುವರು ಗೋವಿಂದರಾಜನಗರ ಬಿಡಿಎ ಕಾಂಪ್ಲೆಕ್ಸ್ ಎದುರಿನ ರಿಂಗ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿ ಚಿತರು ಐ-ಫೋನ್ ಸುಲಿಗೆ ಮಾಡಿ ಪರಾರಿಯಾಗಿ ದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು ದುಶ್ಚಟಗಳ ದಾಸರಾ ಗಿದ್ದು, ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ನಗರದ ವಿವಿಧೆಡೆ ಸುತ್ತಾಡಿ ರಸ್ತೆಯಲ್ಲಿ ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಹಿಂಬಾಲಿಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದರು. ಕದ್ದ ಮೊಬೈಲ್‌ಗಳನ್ನು ಪರಿಚಿತರ ಮೂಲಕ ವಿಲೇವಾರಿ ಮಾಡಿಸಿ ಬಂದ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.