Advertisement
ಇದನ್ನು ನೀಗಿಸಲು ಹಾಗೂ ರೈತರ ಶ್ರಮಕ್ಕೆ ಮತ್ತಷ್ಟು ಬಲ ತುಂಬಲು ಸುಸಜ್ಜಿತವಾದ ಪಶು ಚಿಕಿತ್ಸಾ ವಾಹನ (ಆಂಬ್ಯುಲೆನ್ಸ್) ಲೋಕಾರ್ಪಣೆ ಮಾಡಲು ಪಶುಸಂಗೋಪನೆ ಇಲಾಖೆಯನ್ನು ಸಜ್ಜುಗೊಳಿಸಲಾಗಿದೆ.
Related Articles
Advertisement
ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಇದನ್ನು ಜಾರಿಗೆ ತರಲಾಗುತ್ತಿದ್ದು ಜಾನುವಾರಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದ್ದು ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. ಈ ಸೇವೆಗಳನ್ನು ಇಲಾಖೆಯ ಹೆಲ್ಪಲೈನ್ ಸೇವೆಗಳಿಗೆ ಲಿಂಕ್ ಮಾಡಿ 24×7೭ ಜಾನುವಾರುಗಳ ರಕ್ಷಣೆಗೆ ಉದ್ದೇಶಿಸಲಾಗಿರುತ್ತದೆ.
ಪಶು ಚಿಕಿತ್ಸಾ ವಾಹನದ ವಿಶೇಷತೆಗಳು (ಆಂಬ್ಯುಲೆನ್ಸ್)– ಅತ್ಯಧ್ಯುನಿಕ, ಸುಸಜ್ಜಿತವಾದ ಈ ವಾಹನದಲ್ಲಿ ವಿಶೇಷವಾದ ಪಶು ಸೇವಾ ಸೌಲಭ್ಯಗಳಿವೆ. – ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾನಿಂಗ್ ಇರುವುದು ವಿಶೇಷ – ತುರ್ತು ಚಿಕಿತ್ಸಾ ಘಟಕ – ಔಷಧಿ ಹಾಗೂ ಚಿಕಿತ್ಸಾ ಸಲಕರಣೆಗಳು. – ರೈತನ ಮನೆ ಬಾಗಿಲಿಗೆ ಪಶು ಆಸ್ಪತ್ರೆ – ಸಾಮಾನ್ಯವಾಗಿ ಜಾನುವಾರುಗಳಲ್ಲಿ ಎದುರಾಗುವ ಅರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸ ಬೇಕಾದ ಅನಿವಾರ್ಯತೆ ಇರುತ್ತದೆ. – ವಿಷಪ್ರಾಶನ, ಪ್ರಸವಕ್ಕೆ ಸಂಭಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವುದು. – ಅಪಘಾತ, ಮೂಳೆಮುರಿತ, ಬೆಬೇಸಿಯೋಸಿನ್, ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಹಾಲುಜ್ವರ, ಕೆಚ್ಚಲು ಬಾವು, ವಿವಿಧ ರೋಗೊದ್ರೇಕಗಳು ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಗಳಿಗೆ ಜಾನುವರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಪಡೆಯುವ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ. – ಮೂಕ ರೋಧನೆ ತಪ್ಪಿಸಲು ರೈತರ ಮನೆ ಬಾಗಿಲಿಗೆ ತೆರಳಿ ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರೆ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಿ ರೈತರಿಗೆ ಎದುರಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸಲಿವೆ. ಜಿಲ್ಲಾದ್ಯಂತ ವಾರದಲ್ಲಿ ಒಂದು ದಿನ ಪಶುವೈದ್ಯಕೀಯ ಶಸ್ತ್ರ ಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ಪಶುವೈದ್ಯಕೀಯ ಸೇವೆಯನ್ನು ನೀಡಲಿದ್ದಾರೆ. ಸುಮಾರು 15 ಸುಸಜ್ಜಿತ ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು (ಆಂಬ್ಯುಲೆನ್ಸ್) ಸಧ್ಯದಲ್ಲೇ ಲೋಕಾರ್ಪಣೆ ಮಾಡಲಾಗುತ್ತದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ಸಚಿವರು ಮಾಹಿತಿ ನೀಡಿದ್ದಾರೆ.