Advertisement

ಜನವರಿಯಲ್ಲಿ ಪಿಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ

06:00 AM Dec 24, 2018 | Karthik A |

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ಇತರ ವಿಷಯಗಳ ಪ್ರಾಯೋಗಿಕ ಪರೀಕ್ಷೆ 2019ರ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ. ಪ್ರಥಮ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಜ.3ರಿಂದ 12ರ ವರೆಗೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪ್ರಾಯೋಗಿಕ ಪರೀಕ್ಷೆಗಳು ಜ.21ರಿಂದ ಫೆ.6ರವರೆಗೆ ನಡೆಸಲು ಜಿಲ್ಲಾ ಉಪನಿರ್ದೇಶಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.

Advertisement

2018-19ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪೂರ್ವ ಸಿದ್ಧತಾ ಪರೀಕ್ಷೆ ಜ.7ರಿಂದ 19ರವರೆಗೆ ನಡೆಯಲಿದೆ. ಹಾಗೆಯೇ ಇದೇ ಸಾಲಿನ ಪ್ರಥಮ ಪಿಯುಸಿ ಅಂತಿಮ ಪರೀಕ್ಷೆ ಜ.30ರಿಂದ ಫೆ.11ರವರೆಗೆ ನಡೆಯಲಿದೆ. ಈ ಎರಡು ಪರೀಕ್ಷೆಯ ವಿವರವಾದ ವೇಳಾಪಟ್ಟಿ ಪದವಿಪೂರ್ವ ಶಿಕ್ಷಣ ಇಲಾಖೆ ವೆಬ್‌ಸೈಟ್‌ //www.pue.kar.nic.in/ನಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next