ಮುಂಬಯಿ: ವಿವಾದಗಳಿಂದಲೇ ಹೆಸರಾಗಿದ್ದ ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ಹಠಾತ್ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಅವರ ಮ್ಯಾನೇಜರ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಖಚಿತಪಡಿಸಿದ್ದಾರೆ.
ಪೂನಂ ಅವರು ಗರ್ಭಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಗುರುವಾರ ತಡರಾತ್ರಿ ಕಾನ್ಪುರದಲ್ಲಿ ನಿಧನ ಹೊಂದಿದ್ದಾರೆ.
32 ವರ್ಷದ ಪೂನಂ ಪಾಂಡೆ ಗರ್ಭಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಈ ವಿಷಯವನ್ನು ನಟಿಯ ತಂಡ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬಹಿರಂಗಪಡಿಸಿದೆ. ಅದರಲ್ಲಿ ‘ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಳೆದುಕೊಂಡಿದ್ದೇವೆ ಎಂದು ಘೋಷಿಸಲು ನಮಗೆ ದುಃಖವಾಗಿದೆ ಎಂದು ಬರೆದುಕೊಂಡಿದ್ದಾರೆ.
ನಟಿಯ ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ತೀವ್ರ ಆಘಾತಕ್ಕೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ.
ಪೂನಂ ಪಾಂಡೆ 2013 ರ ‘ನಶಾ’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ಅಷ್ಟು ಮಾತ್ರವಲ್ಲದೆ ತೆಲುಗು, ಬೋಜ್ಪುರಿ ಚಿತ್ರಗಳಲ್ಲೂ ಪೂನಂ ನಟಿಸಿದ್ದಾರೆ. ಅವರು ಕೊನೆಯ ಬಾರಿಗೆ ‘ಲಾಕ್ ಅಪ್’ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡರು.