Advertisement
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಸಂತ್ರಸ್ತರ ಪರಿಹಾರ ಹಾಗೂ ಪುನರ್ವಸತಿ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಿದ್ದು ದೇಶದಲ್ಲೇ ಮಾದರಿಯಾದ ಮನೆ ನಿರ್ಮಿಸಿಕೊಡಲಾಗುವುದು ಎಂದು ಹೇಳಿದರು.
ಸಂಬಂಧಿಸಿದಂತೆ ಸರ್ವೇ ನಂಬರ್ ಸಹ ಗುರುತಿಸಲಾಗಿದೆ. ಉಳಿದ ಭೂಮಿಯ ಸರ್ವೇ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಕೊಡಗು ಜಿಲ್ಲೆಯನ್ನು ಪುನರ್ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ. ವಸತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಇಂದು ವರದಿ ಸಲ್ಲಿಸಿದ್ದಾರೆ. 758 ಕುಟುಂಬಗಳು ಸೂರು ಕಳೆದುಕೊಂಡಿದ್ದು, ಅವರಿಗೆ ಮಾದರಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ಸದ್ಯಕ್ಕೆ ಆಶ್ರಯ ಕೇಂದ್ರಗಳಲ್ಲಿ ಅವರಿಗೆ ನೆರವು ಕಲ್ಪಿಸಲಾಗಿದೆ ಎಂದರು.
Related Articles
Advertisement
ಕೊಡಗಿನ ಅನಾಹುತಕ್ಕೆ ಅವೈಜ್ಞಾನಿಕ ಪ್ರಗತಿ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ತಜ್ಞರ ಸಲಹೆ ಪಡೆಯುತ್ತೇವೆ. ಗುಡ್ಡಗಾಡು ಪ್ರದೇಶಗಳಲ್ಲಿ ಕಟ್ಟಡಗಳ ನಿರ್ಮಾಣವನ್ನು ವೈಜ್ಞಾನಿಕವಾಗಿ ಮಾಡುತ್ತೇವೆ. ಅದಕ್ಕಾಗಿ ಅಗತ್ಯ ಮಾನದಂಡಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಕೊಡಗಿನ ಜನರಿಗೆ ವಸತಿ ಕಲ್ಪಿಸಲು ಕನಿಷ್ಠ 6ತಿಂಗಳು ಬೇಕು. ಅಲ್ಲಿಯವರೆಗೆ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ವಸತಿ ಸೌಲಭ್ಯ ಕಲ್ಪಿಸುವ ಸಂಬಂಧ ಚರ್ಚೆಗಳು ನಡೆಯುತ್ತಿವೆ. ನೆರೆ ಹಾವಳಿಯಿಂದ ಹಾನಿಯಾಗಿರುವ ಮನೆಗಳಿಗೆ ಜಿಲ್ಲಾಧಿಕಾರಿ ಮೂಲಕ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.
ಸರಕಾರದಿಂದ ಉಡುಗೊರೆ ಕಿಟ್ಕೊಡಗು ಜಿಲ್ಲೆಯಲ್ಲಿ ಸಂಭವಿಸಿರುವುದು ಪ್ರಕೃತಿ ವಿಕೋಪ. ಆದುದರಿಂದ, ಈ ಜಿಲ್ಲೆಯಲ್ಲಿ ಕಟ್ಟುವ ಮನೆಗಳಿಗೆ
ಪ್ರತ್ಯೇಕವಾದ ಅನುದಾನ ಬಳಕೆಯಾಗಲಿದೆ ಎಂದು ಸಚಿವ ಖಾದರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಹೊಸ ಮನೆಗಳಿಗೆ ಹೋಗುವವರಿಗೆ ರಾಜ್ಯ ಸರಕಾರದಿಂದ ಉಡುಗೊರೆ ಕಿಟ್ ಅನ್ನು ನೀಡಲು ಉದ್ದೇಶಿಸಲಾಗಿದೆ. ಅದರಲ್ಲಿ ಗೃಹ ಬಳಕೆಗೆ ತಿಂಗಳಿಗೆ ಅಗತ್ಯರುವಷ್ಟು ಸಾಮಗ್ರಿಗಳು ಸೇರಿ ಇನ್ನಿತರ ವಸ್ತುಗಳು ಇರಲಿವೆ ಎಂದರು.