Advertisement
ಸೋಮವಾರ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು, ಗೌತಮ್ ಅದಾನಿ ವಿಷಯದ ಬಗ್ಗೆ ಚರ್ಚೆ ನಡೆಸಬೇಕು. ಸೊರೊಸ್ ನೆರವು ನೀಡುವ ಸಂಸ್ಥೆ ಜತೆಗೆ ಸೋನಿಯಾ ಗಾಂಧಿ ಜತೆಗೆ ಲಿಂಕ್ ಇದೆ ಎಂದು ಆರೋಪಿಸಿದ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಸದನದ ಬಾವಿಗಳಿದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ವೇಳೆ “ಮೋದಿ ಸರ ಕಾ ರಕ್ಕೆ ಧಿಕ್ಕಾರ’, “ನಮಗೆ ನ್ಯಾಯ ಕೊಡಬೇಕು’ ಎಂದು ಘೋಷಣೆಗಳನ್ನು ಕೂಗಿದರು. ಬಳಿಕ ಸಮಾಜವಾದಿ ಪಕ್ಷದ ಸಂಸದರು ಬಾವಿಗಿಳಿದ ಕಾರಣ ಗದ್ದಲ ಹೆಚ್ಚಾಗಿ ಕಲಾಪವನ್ನು ಮಧ್ಯಾಹ್ನ 2ಗಂಟೆಗೆ ಮುಂದೂಡಲಾಯಿತು. ಅನಂತರ ಸದನ ಸಮಾ
Related Articles
Advertisement
ಸೊರೊಸ್ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವೆ ಭಾರೀ ವಾಗ್ಯುದ್ಧ ನಡೆದಿದೆ. ಕಾಂಗ್ರೆಸ್ ವಿದೇಶಿ ಶಕ್ತಿಗಳ ಕೈಗೊಂಬೆಯಾಗಿದೆ ಎಂದು ನಡ್ಡಾ ಆರೋಪಿಸಿದರೆ, ನಾವು ದೇಶಭಕ್ತರು ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಜಾರ್ಜ್ ಸೊರೊಸ್ ಕಂಪೆನಿ ಹಾಗೂ ಸೋನಿಯಾ ಗಾಂಧಿ ನಡುವೆ ಇರುವ ಸಂಬಂಧ ಗಂಭೀರವಾದದ್ದು. ಆ ಪಕ್ಷ ವಿದೇಶಿ ಶಕ್ತಿಗಳ ಕೈಗೊಂಬೆಯಾಗಿದೆ. ಈ ಮೂಲಕ ದೇಶದಲ್ಲಿ ಅಸ್ಥಿರತೆ ಉಂಟು ಮಾಡಲು ಯತ್ನಿಸುತ್ತಿದೆ ಎಂದು ನಡ್ಡಾ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಭಾರತದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯಲು ಕಾಂಗ್ರೆಸ್ ಬದ್ಧವಾಗಿದೆ. ದೇಶದಲ್ಲಿರುವ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಹೀಗೆ ವರ್ತಿಸುತ್ತಿದೆ ಎಂದು ಹೇಳಿದ್ದಾರೆ.
ಸೊರೊಸ್, ಸೋನಿಯಾ ಲಿಂಕ್ ಗಂಭೀರ: ರಿಜಿಜುಜಾರ್ಜ್ ಸೊರೊಸ್ ಬೆಂಬಲಿತ ಸಂಘಟನೆಯ ಜತೆಗೆ ಸೋನಿಯಾ ಗಾಂಧಿ ಹೊಂದಿರುವ ಸಂಪರ್ಕ ಗಂಭೀರ ಸ್ವರೂಪದ್ದು. ಇದು ಭಾರತ ವಿರೋಧಿ ಕೃತ್ಯವಾಗಿದ್ದು, ಇದನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಮಾತನಾಡಿದ ಅವರು, ಹೊರಗಿನ ವ್ಯಕ್ತಿಗಳು ಭಾರತದ ಮೇಲೆ ನಿಯಂತ್ರಣ ಸಾಧಿಸಲು ಯತ್ನಿಸಿದರೆ ಅದನ್ನು ನೋಡಿಕೊಂಡು ಸುಮ್ಮನಿರಲಾಗದು ಎಂದರು. ಅದಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್‌ನ ಪವನ್ ಖೇರಾ “ನಾವು ದೇಶಪ್ರೇಮಿಗಳಾಗಿದ್ದು, ದೇಶವಿರೋಧಿ ಕೃತ್ಯದಲ್ಲಿ ತೊಡಗಿಕೊಳ್ಳುವುದು ಸಾಧ್ಯವೇ ಇಲ್ಲ’ ಎಂದರು.