Advertisement

14,500 ಶಾಲೆಗಳ ಉನ್ನತಿ; ಶಾಲೆಗಳ ಮೇಲ್ದರ್ಜೆಗೇರಿಸಲು ಪಿಎಂ-ಶ್ರೀ ಯೋಜನೆ

12:22 PM Sep 06, 2022 | Team Udayavani |

ನವದೆಹಲಿ: ಪಿಎಂ-ಶ್ರೀ (ಪ್ರಧಾನಮಂತ್ರಿ ಸ್ಕೂಲ್ಸ್‌ ಫಾರ್‌ ರೈಸಿಂಗ್‌ ಇಂಡಿಯಾ) ಎಂಬ ಹೊಸ ಯೋಜನೆಯಡಿ ದೇಶದ 14,500 ಶಾಲೆಗಳನ್ನು ಉನ್ನತೀಕರಿಸಿ, ಅವುಗಳನ್ನು ಮಾದರಿ ಶಾಲೆಗಳಾಗಿ ರೂಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

Advertisement

ಶಿಕ್ಷಕರ ದಿನದಂದೇ ಅವರು ಇಂಥದ್ದೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಸೋಮವಾರ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, “ರಾಷ್ಟ್ರೀಯ ಶಿಕ್ಷಣ ನೀತಿಯ ಅನ್ವಯ ದೇಶದ 14,500 ಪಿಎಂ-ಶ್ರೀ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಈ ಶಾಲೆಗಳು ಆಧುನಿಕ, ಪರಿವರ್ತನೆಯ ಮತ್ತು ಸಮಗ್ರ ಶಿಕ್ಷಣವನ್ನು ಒದಗಿಸಲಿವೆ. ಆವಿಷ್ಕಾರ ಆಧರಿತ, ಕಲಿಕಾ ಕೇಂದ್ರಿತ ಬೋಧನೆಗೆ ಹೆಚ್ಚಿನ ಮಹತ್ವ ನೀಡಲಾಗುವುದು.

ಅತ್ಯಾಧುನಿಕ ತಂತ್ರಜ್ಞಾನಗಳು, ಸ್ಮಾರ್ಟ್‌ ತರಗತಿಗಳು, ಕ್ರೀಡೆ ಸೇರಿದಂತೆ ಹಲವಾರು ಆಧುನಿಕ ಮೂಲಸೌಕರ್ಯ ಗಳನ್ನು ಈ ಮಾದರಿ ಶಾಲೆಗಳಲ್ಲಿ ಕಲ್ಪಿಸಲಾಗುವುದು’ ಎಂದು ಹೇಳಿದ್ದಾರೆ.  ಈ ಯೋಜನೆಯು ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಿದೆ ಎಂದೂ ಅವರು ತಿಳಿಸಿದ್ದಾರೆ.

ಪಿಎಂ-ಶ್ರೀ ಉದ್ದೇಶ?
– ನೂತನ ಶಿಕ್ಷಣ ನೀತಿಯ ಪ್ರಯೋಗಶಾಲೆಗಳಾಗಿ ಇವು ಕಾರ್ಯನಿರ್ವಹಿಸಲಿವೆ
– ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಆವಿಷ್ಕಾರ ಆಧರಿತ, ಕಲಿಕಾ ಕೇಂದ್ರಿತ ಬೋಧನೆ
– ಆಧುನಿಕ ತಂತ್ರಜ್ಞಾನ, ಸ್ಮಾರ್ಟ್‌ ತರಗತಿ ಮತ್ತಿತರ ಮೂಲಸೌಕರ್ಯ ಒದಗಿಸುವುದು
– ಸಮಾನ, ಎಲ್ಲರನ್ನೊಳಗೊಂಡ, ಆನಂದದಾಯಕ ಪರಿಸರದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next