Advertisement

ಫೆಬ್ರವರಿಯಲ್ಲಿ 4 ಬಾರಿ ಬರ್ತಾರೆ ಮೋದಿ; ವಿವಿಧ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿ

10:27 PM Jan 21, 2023 | Team Udayavani |

ಹೊಸದಿಲ್ಲಿ/ಬೆಂಗಳೂರು: ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿರುವ ಕರುನಾಡಿಗೆ ಫೆಬ್ರವರಿ ತಿಂಗಳಿನಲ್ಲಿಯೂ ಪ್ರಧಾನಿ ನರೇಂದ್ರ ಮೋದಿಯವರು ನಾಲ್ಕು ಬಾರಿ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

Advertisement

ಫೆ. 6 ಹಾಗೂ ಫೆ.12ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುವುದು ಬಹುತೇಕ ಅಂತಿಮವಾಗಿದೆ. ಫೆ. 6ರಂದು ಎಚ್‌ಎಎಲ್‌ ಹಾಗೂ ಗುಬ್ಬಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಫೆ. 12ರಂದು ನಡೆಯುವ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನ ಕಾರ್ಯಕ್ರಮಕ್ಕೂ ಮೋದಿ ಆಗಮಿಸುವುದು ದೃಢಪಟ್ಟಿದೆ. ಉಳಿದ ಎರಡು ಕಾರ್ಯಕ್ರಮಗಳ ದಿನಾಂಕ ನಿಗದಿಯಾಗಿಲ್ಲ.

ನಾಲ್ಕು ಕಡೆ ಪ್ರವಾಸ
ಕರಾವಳಿ, ಬೆಂಗಳೂರು, ಮೈಸೂರು ಮತ್ತು ಉತ್ತರ ಕರ್ನಾಟಕಕ್ಕೆ ಪ್ರಧಾನಿ ಮೋದಿಯವರು ಆಗಮಿಸುವ ಸಾಧ್ಯತೆ ಇದೆ. ಅತ್ತ ದಾವಣಗೆರೆಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಫೆಬ್ರವರಿ ಕೊನೆಯ ವಾರ ಅಥವಾ ಮಾರ್ಚ್‌ ಮೊದಲ ವಾರ ದಾವಣಗೆರೆಗೆ ಮೋದಿಯವರನ್ನು ಕರೆಸುವ ಸಾಧ್ಯತೆ ಎಂದು ಹೇಳಿದ್ದಾರೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಡಾ| ಸುಧಾಕರ್‌ ಜಿಲ್ಲೆಯ ವೈದ್ಯಕೀಯ ಕಾಲೇಜು ಉದ್ಘಾಟನೆಗೆ ಪ್ರಧಾನಿ ಮೋದಿ ಅವರು ಫೆಬ್ರವರಿಯಲ್ಲಿ ಆಗಮಿಸಲಿದ್ದಾರೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next