Advertisement

ಯಡಿಯೂರಪ್ಪರನ್ನು ಅಭಿನಂದಿಸಿದ ಮೋದಿ

11:03 PM Dec 14, 2019 | Lakshmi GovindaRaj |

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿರುವ ಬಗ್ಗೆ ಇತ್ತೀಚೆಗಷ್ಟೇ ದೆಹಲಿಯಲ್ಲಿ ಸಂಸದರ ಸಭೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಶನಿವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ.

Advertisement

ಶನಿವಾರ ಬೆಳಗ್ಗೆ ಕರೆ ಮಾಡಿದ ಪ್ರಧಾನಿಯವರು ಸುಮಾರು ಎಂಟು ನಿಮಿಷಗಳ ಕಾಲ ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದರು. ಇತ್ತೀಚೆಗೆ ನಡೆದ 15 ಕ್ಷೇತ್ರಗಳ ಉಪಚುನಾವಣೆ ಯಲ್ಲಿ ಬಿಜೆಪಿ 12 ಸ್ಥಾನ ಗೆದ್ದು ಸರ್ಕಾರವನ್ನು ಸುಭದ್ರಪಡಿಸಿಕೊಂಡಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರಧಾನಿ ಅಭಿನಂದನೆ ಸಲ್ಲಿಸಿದರು ಎಂದು ಮುಖ್ಯಮಂತ್ರಿಗಳ ಆಪ್ತ ಮೂಲಗಳು ಹೇಳಿವೆ.

ಹಾಗೆಯೇ ಜಿಎಸ್‌ಟಿ ಸೇರಿದಂತೆ ಇತರ ಮೂಲಗಳಿಂದ ಉತ್ತಮವಾಗಿ ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡುವ ಮೂಲಕ ಆರ್ಥಿಕ ಬಲವರ್ಧನೆಗೆ ಒತ್ತು ನೀಡಬೇಕು. ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರದಿಂದ ಅಗತ್ಯ ಸಹಕಾರ ನೀಡಲಾಗುವುದು. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವು ದೇ ರೀತಿಯಲ್ಲೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಪರಿಸ್ಥಿತಿ ನಿಯಂತ್ರಿಸಬೇಕು ಎಂದು ಮೋದಿಯವರು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next