Advertisement

“ಮೋದಿ’ಕುಲನಾಮ ಹೇಳಿಕೆ ಪ್ರಕರಣ: Rahul Gandhi ತೀರ್ಪು ಎ.20ಕ್ಕೆ

11:58 PM Apr 13, 2023 | Team Udayavani |

ಸೂರತ್‌ (ಗುಜರಾತ್‌): “ಮೋದಿ’ ಕುಲನಾಮ ಹೇಳಿಕೆ ಪ್ರಕರಣದಲ್ಲಿ ತಮಗೆ ವಿಧಿಸಲಾಗಿರುವ 2 ವರ್ಷಗಳ ಜೈಲುಶಿಕ್ಷೆಯನ್ನು ರದ್ದು ಮಾಡಬೇಕೆಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೂರತ್‌ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ಮುಗಿಸಿರುವ ಸೂರತ್‌ನ ಸೆಷನ್ಸ್ ನ್ಯಾಯಾಲಯ ಎ. 20ಕ್ಕೆ ತೀರ್ಪನ್ನು ಕಾಯ್ದಿರಿ­ಸಿದೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು, ಮುಂದಿನ ಗುರುವಾರಕ್ಕೆ ತೀರ್ಪನ್ನು ಕಾಯ್ದಿರಿಸಿದರು.

Advertisement

ಕರ್ನಾಟಕದ ಕೋಲಾರದಲ್ಲಿ 2019ರ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ್ದ ರಾಹುಲ್‌ ಗಾಂಧಿ, “ಎಲ್ಲಾ ಕಳ್ಳರಿಗೂ ಮೋದಿ ಎಂಬ ಕುಲನಾಮ ಏಕಿದೆ?’ ಎಂದು ಟೀಕೆ ಮಾಡಿದ್ದರು. ಈ ಹೇಳಿಕೆ ಸಂಬಂಧ ಬಿಜೆಪಿಯ ಗುಜರಾತ್‌ ಶಾಸಕ ಪೂರ್ಣೇಶ್‌ ಮೋದಿ ಕ್ರಿಮಿನಲ್‌ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ಮೊದಲು ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್‌ನ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ, ರಾಹುಲ್‌ ಗಾಂಧಿ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ, ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಪರಿಣಾಮ ರಾಹುಲ್‌ ಸಂಸತ್‌ ಸದಸ್ಯತ್ವ ಕಳೆದುಕೊಂಡಿದ್ದರು. ಈ ತೀರ್ಪಿನ ವಿರುದ್ಧ ರಾಹುಲ್‌ ಮೇಲ್ಮನವಿ ಸೆಷನ್ಸ್‌ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅವರಿಗೆ ಆಗಲೇ ಜಾಮೀನು ನೀಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next