Advertisement

ಹುಬ್ಬಳ್ಳಿಯಲ್ಲಿ ಮೋದಿ ಫೆಸ್ಟ್‌ಗೆ ಚಾಲನೆ

12:12 PM Jun 03, 2017 | Team Udayavani |

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ರಾಜ್ಯ ಸರ್ಕಾರ ವಿಫ‌ಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಆರೋಪಿಸಿದರು.

Advertisement

ನಗರದ ನೆಹರು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರು ವರ್ಷಗಳ ಸಾಧನೆ ಹಾಗೂ ಯೋಜನೆಗಳನ್ನು ಬಿಂಬಿಸುವ ಉದ್ದೇಶದ ಮೋದಿ ಫೆಸ್ಟ್‌ಗೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಸರ್ಕಾರ ಜನ ಸಾಮಾನ್ಯರಿಗಾಗಿ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೀಡಿದ ಬೆಳೆನಷ್ಟ ಪರಿಹಾರವನ್ನು ರೈತರ ಬ್ಯಾಂಕ್‌ ಖಾತೆಗೆ ಜಮಾ ಮಾಡುತ್ತಿಲ್ಲ. ರಾಜ್ಯ ಸರ್ಕಾರದ ದುರಾಡಳಿತದಿಂದ ರೈತರು ಸಮಸ್ಯೆ ಎದುರಿಸುವಂತಾಗಿದೆ ಎಂದರು.

ರಾಜ್ಯದ ಅನೇಕ ರೈತರಿಗೆ ಇನ್ನೂ ಬೆಳೆಹಾನಿ ಪರಿಹಾರ ನೀಡಲು ಸಾಧ್ಯವಾಗಿಲ್ಲ ಎಂದು ಸಚಿವ ಕಾಗೋಡು ತಿಮ್ಮಪ್ಪ ಅವರೇ ಹೇಳಿಕೆ ನೀಡಿದ್ದಾರೆ. 

ಬರಗಾಲ ಹಿನ್ನೆಲೆಯಲ್ಲಿ ರೈತರು ತೊಂದರೆಯಲ್ಲಿದ್ದಾರೆ. ಪರಿಹಾರದ ಹಣ ಬೇಗನೆ ತಲುಪಿಸಲು ಕ್ರಮ ಕೈಗೊಳ್ಳಬೇಕು. ಫಸಲ್‌ ಬಿಮಾ ಯೋಜನೆಯಲ್ಲಿ ಅ ಧಿಕಾರಿಗಳ ಬೇಜವಾಬ್ದಾರಿಯಿಂದ ಸಮೀಕ್ಷೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.

Advertisement

ಕೇಂದ್ರ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಪ್ರಧಾನಿ ಮೋದಿ ಜನರೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ. ಪ್ರಧಾನಿಯವರ ಮನ್‌ ಕೀ ಬಾತ್‌ ಸಾಕಷ್ಟು ಮನ್ನಣೆ ದೊರೆತಿದೆ. ಮುಂದೆ ಜನರ ಮಾತು ಆಲಿಸಲು “ಜನ ಕೀ ಬಾತ್‌’ ಎಂಬ ಕಾರ್ಯಕ್ರಮ ಆರಂಭಿಸಿರುವುದು ಸ್ತುತ್ಯಾರ್ಹ ಎಂದರು.

ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ದೇಶದಲ್ಲಿ ನರೇಂದ್ರ ಮೋದಿಯವರ ಉತ್ತಮ ಆಡಳಿತದಿಂದ ಜನರ ವಿಶ್ವಾಸಗಳಿಸಿಕೊಂಡಿದೆ. ಬರುವ ವರ್ಷದಲ್ಲಿ ಜಿಎಸ್‌ಟಿ ಶೇ.7.8 ರಷ್ಟು ಅಭಿವೃದ್ಧಿ ಸಾಧಿ ಸುವ ಗುರಿ ಹೊಂದಲಾಗಿದೆ. ಜಾಗತಿಕ ಮಟ್ಟದಲ್ಲಿ ದೇಶದ ಸಾಲ ಕಡಿಮೆಯಾಗಿದೆ. ರಾಜ್ಯ ಸರ್ಕಾರಕ್ಕೆ ಈಗಾಗಲೇ 3500 ಕೋಟಿ ಹಣ ಬಿಡುಗಡೆ ಮಾಡಿದ್ದು, ಅದನ್ನು ಖರ್ಚು ಮಾಡಿದಲ್ಲಿ ಇನ್ನೂ 1000 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದರು. ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌, ಮಹಾಪೌರ ಡಿ.ಕೆ. ಚವ್ಹಾಣ ಉಪಸ್ಥಿತರಿದ್ದರು .

Advertisement

Udayavani is now on Telegram. Click here to join our channel and stay updated with the latest news.

Next