Advertisement

UAPA ಅಡಿಯಲ್ಲಿ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ ನಿಷೇಧಿಸಿದ ಕೇಂದ್ರ ಸರ್ಕಾರ

01:37 PM Mar 13, 2024 | Team Udayavani |

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ ಅನ್ನು ಕೇಂದ್ರ ಸರಕಾರ ಮಂಗಳವಾರ ನಿಷೇಧಿಸಿದೆ.

Advertisement

ಗೃಹ ವ್ಯವಹಾರಗಳ ಸಚಿವಾಲಯ (MHA) ಆದೇಶದಲ್ಲಿ, ಹುರಿಯತ್ ಕಾನ್ಫರೆನ್ಸ್‌ನ ಒಂದು ಘಟಕ JKNF ಸಂಘಟನೆಯನ್ನು ತತ್ ಕ್ಷಣವೇ ಜಾರಿಗೆ ಬರುವಂತೆ “ಕಾನೂನುಬಾಹಿರ ಸಂಘಟನೆ ” ಎಂದು ಘೋಷಿಸಿದೆ.

ಜೆಕೆಎನ್ ಎಫ್ “ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಪೂರ್ವಾಗ್ರಹ ಪೀಡಿತವಾದ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಲು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರಿಗೆ ಲಾಜಿಸ್ಟಿಕ್ ಬೆಂಬಲವನ್ನು ಒದಗಿಸಲು, ಭಾರತ ವಿರೋಧಿ ಪ್ರಚಾರವನ್ನು ಬೆಂಬಲಿಸುವಲ್ಲಿ ತೊಡಗಿಸಿಕೊಂಡಿದೆ ಎಂದು ಕೇಂದ್ರ ಸರಕಾರ ಹೇಳಿದೆ.

JKNF ಸದಸ್ಯರು “ಕಾಶ್ಮೀರದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವುದು, ಭದ್ರತಾ ಪಡೆಗಳ ಮೇಲೆ ನಿರಂತರ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ಹಿಂಸಾತ್ಮಕ ಪ್ರತಿಭಟನಾಕಾರರನ್ನು ಸಜ್ಜುಗೊಳಿಸುವಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಹೇಳಿ ಐದು ವರ್ಷಗಳ ಅವಧಿಗೆ ನಿಷೇಧ ಹೇರಿದೆ.

Advertisement

Udayavani is now on Telegram. Click here to join our channel and stay updated with the latest news.

Next