ಬಾರಾಮುಲ್ಲಾ: ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟ ಪಡಿಸಿದ್ದಾರೆ.
ನರೇಂದ್ರ ಮೋದಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ಅಳಿಸಿಹಾಕುತ್ತದೆ. ಕಾಶ್ಮೀರವನ್ನು ದೇಶದ ಅತ್ಯಂತ ಶಾಂತಿಯುತ ಸ್ಥಳವನ್ನಾಗಿ ಮಾಡುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ಬಾರಾಮುಲ್ಲಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, 1990 ರ ದಶಕದಿಂದ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯು 42,000 ಜೀವಗಳನ್ನು ಬಲಿ ಪಡೆದಿದೆ. ಭಯೋತ್ಪಾದನೆಯು ಯಾರಿಗಾದರೂ ಪ್ರಯೋಜನವನ್ನು ನೀಡಿದೆಯೇ ಎಂದು ಕೇಳಿದರು.
“ಕೆಲವರು ನಾವು ಪಾಕಿಸ್ತಾನದೊಂದಿಗೆ ಮಾತನಾಡಬೇಕು ಎಂದು ಹೇಳುತ್ತಾರೆ. ನಾವೇಕೆ ಪಾಕಿಸ್ತಾನದೊಂದಿಗೆ ಮಾತನಾಡಬೇಕು? ನಾವು ಮಾತನಾಡುವುದಿಲ್ಲ. ನಾವು ಬಾರಾಮುಲ್ಲಾದ ಜನರೊಂದಿಗೆ ಮಾತನಾಡುತ್ತೇವೆ, ನಾವು ಕಾಶ್ಮೀರದ ಜನರೊಂದಿಗೆ ಮಾತನಾಡುತ್ತೇವೆ” ಎಂದು ಶಾ ಹೇಳಿದರು.
ಮೋದಿ ಸರ್ಕಾರವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ. ಅದನ್ನು ಕೊನೆಗೊಳಿಸಲು, ಅಳಿಸಲು ಬಯಸುತ್ತದೆ. ನಾವು ಜಮ್ಮು ಮತ್ತು ಕಾಶ್ಮೀರವನ್ನು ದೇಶದ ಅತ್ಯಂತ ಶಾಂತಿಯುತ ಸ್ಥಳವನ್ನಾಗಿ ಮಾಡಲು ಬಯಸುತ್ತೇವೆ” ಎಂದು ಅವರು ಹೇಳಿದರು.
ಇದನ್ನೂ ಓದಿ:ಚಿನ್ನ ವ್ಯಾಪಾರಿಗಳನ್ನು ಅಡ್ಡಗಟ್ಟಿ 2.11 ಕೋಟಿ ರೂ. ದರೋಡೆ, ಪೊಲೀಸರಿಂದ ಶೋಧ ಕಾರ್ಯ
“ಕಳೆದ ಮೂರು ವರ್ಷಗಳಲ್ಲಿ ಕಾಶ್ಮೀರದ ಎಲ್ಲಾ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ನೀಡಿದ್ದೇವೆ” ಎಂದು ಶಾ ರ್ಯಾಲಿಯಲ್ಲಿ ಹೇಳಿದರು.