Advertisement

Hubli; ಮಂದಿರ ಸ್ಥಾಪನೆ ಮೂಲಕ ಮೋದಿ ರಾಮನ ಕೃಪೆಗೆ ಪಾತ್ರರಾಗಿದ್ದಾರೆ: ಪ್ರಹ್ಲಾದ ಜೋಶಿ

02:44 PM Jan 22, 2024 | Team Udayavani |

ಹುಬ್ಬಳ್ಳಿ: ರಾಮಭಕ್ತನಿಗಾಗಿ ಶ್ರೀರಾಮಚಂದ್ರ ಕಾಯುತ್ತಿದ್ದ, ಅದರಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ರಾಮಮಂದಿರ ಸ್ಥಾಪಿಸುವ ಮೂಲಕ ಶ್ರೀರಾಮನ ಕೃಪೆಗೆ ಪಾತ್ರರಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

Advertisement

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ, ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ಗೊಲ್ಲರ ಕಾಲೋನಿಯಲ್ಲಿ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಇಡೀ ಜಗತ್ತೆ ಶ್ರೀರಾಮ ಮಂದಿರ ನಿರ್ಮಾಣದ ಸಂಭ್ರಮಾಚರಣೆಯಲ್ಲಿದ್ದು, ನಾವು ಕೂಡಾ ಬೆಳಿಗ್ಗೆಯಿಂದ ಎಲ್ಲ ದೇವಸ್ಥಾನಗಳಿಗೆ ಭೇಟಿ ನೀಡಿ, ದರ್ಶನ ಪಡೆದುಕೊಂಡಿದ್ದೇನೆ. ಎಲ್ಲೆಡೆ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ ಎಂದರು.

ನಾಡಿನಾದ್ಯಂತ ರಾಮನ ಸಂಭ್ರಮ ಮನೆ ಮಾಡಿದೆ, ಈ ಸಂಭ್ರಮವನ್ನು ಕೋಟ್ಯಾಂತರ ಜನರು ಟಿವಿಯ ಮೂಲಕ ವೀಕ್ಷಣೆ ಮಾಡುತ್ತಿದ್ದು, ಸಾವಿರಾರು ಜನರು ಅಯೋಧ್ಯೆಗೆ ಹೋಗಿದ್ದಾರೆ. ನಗರದ ಹಲವೆಡೆಗಳಲ್ಲಿ ಎಲ್ಇಡಿ ಸ್ಕ್ರೀನ್ ಹಾಕಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಮ್ಮ ರಾಮ ನಮ್ಮ ಮನೆಗೆ ಬಂದಿದ್ದಾರೆಂಬ ಭಾವನೆ ಜನರಲ್ಲಿದೆ. ಈ ಮೂಲಕ ಎಲ್ಲರ ಮನೆ ಮನಗಳಲ್ಲಿ ರಾಮ ವಿಜೃಂಭಿಸುತ್ತಿದ್ದಾನೆ. ಈ ಎಲ್ಲ ಕಾರ್ಯಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಜೆ ನೀಡದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ತುಷ್ಟಿಕರಣ ರಾಜಕಾರಣ ಮಾಡುತ್ತಿದ್ದು, ರಜೆ ನೀಡದೇ ಇರುವುದಕ್ಕೆ ಇದೇ ಕಾರಣ. ಸಿಎಂ ಸಿದ್ದರಾಮಯ್ಯ ಅವರು ರಜೆ ನೀಡುವ ಕುರಿತು ರಾಹುಲ್ ಗಾಂಧಿ ಅವರಿಗೆ ಕೇಳಿರಬಹುದು, ಅವರು ಬೇಡಾ ಎಂದಿದ್ದಾರೆ ಅದಕ್ಕೆ ರಜೆ ನೀಡದೇ ಇರಬಹುದು ಎಂದು ವ್ಯಂಗ್ಯವಾಡಿದರು

ರಾಮಜನ್ಮಭೂಮಿ ಹೋರಾಟ ಆರಂಭ ಆದಾಗಿನಿಂದಲೂ ಕಾಂಗ್ರೆಸ್ ಇದೇ ರೀತಿ ತುಷ್ಟಿಕರಣ ರಾಜಕಾರಣ ಮಾಡುತ್ತಿದೆ. ಇದೀಗ ಮಂದಿರ ಉದ್ಘಾಟನೆಗೆ ಆಮಂತ್ರಣ ಪತ್ರಿಕೆ ನೀಡಿದರೂ ಕೂಡಾ ಬರುವುದಿಲ್ಲ ಎನ್ನುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.

Advertisement

ಆರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅಯೋಧ್ಯೆಗೆ ಹೋಗುವುದಿಲ್ಲ ಎಂದು ಹೇಳಿದ್ದರು, ಬಳಿಕ ಜನರ ಭಾವನೆ ತಿಳಿದು ಅಯೋಧ್ಯೆಗೆ ಹೋಗುತ್ತೇನೆ ಎಂದು ಹೇಳುತ್ತಿದ್ದಾರೆ ಇದು ನಿಜವಾದ ಭಕ್ತಿ ಅಲ್ಲ, ಹಿಂದೂ ವಿರೋಧಿ ಸಿದ್ದರಾಮಯ್ಯ ಎನ್ನುವುದು ಈ ಮೂಲಕ ತಿಳಿಯುತ್ತದೆ ಎಂದು ಪ್ರಲ್ಹಾದ್ ಜೋಶಿ ಕುಟುಕಿದರು.

Advertisement

Udayavani is now on Telegram. Click here to join our channel and stay updated with the latest news.

Next