Advertisement
ಈ ಬಗ್ಗೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು, ದೇಶದಲ್ಲಿ ಇಲ್ಲಿಯ ವರೆಗೆ ಯಾರೂ ಪ್ರಧಾನಿ ಪಟ್ಟವನ್ನು ಇಂತಹ ಕೀಳುಮಟ್ಟಕ್ಕೆ ಇಳಿಸಿರಲಿಲ್ಲ.
Related Articles
Advertisement
ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ ಶೇ. 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ. 3ರಿಂದ ಶೇ. 5ಕ್ಕೆ ಹೆಚ್ಚಿಸುವುದಾಗಿ ಹಿಂದಿನ ಬಿಜೆಪಿ ಸರಕಾರ ಘೋಷಿಸಿತ್ತು. ಈ ಬಗ್ಗೆ ಕೇಂದ್ರ ಸರಕಾರಕ್ಕೂ ಪತ್ರ ಬರೆದಿರುವುದಾಗಿ ತಿಳಿಸಿತ್ತು. ಆದರೆ ಇಂತಹ ಯಾವ ಪತ್ರ ಕೂಡ ರಾಜ್ಯದ ಬಿಜೆಪಿ ಸರಕಾರದಿಂದ ತಮಗೆ ಬಂದಿಲ್ಲ; ಆ ರೀತಿಯ ಮೀಸಲಾತಿ ಏರಿಕೆಯ ಪ್ರಸ್ತಾವ ತಮ್ಮ ಪರಿಶೀಲನೆಯಲ್ಲಿ ಇಲ್ಲ ಎಂದು 2023ರ ಮಾ. 14ರಂದು ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಸಚಿವ ನಾರಾಯಣ ಸ್ವಾಮಿ ಅವರೇ ಲೋಕಸಭೆಗೆ ತಿಳಿಸಿದ್ದರು. ಸರಕಾರದ ಈ ನಿರ್ಧಾರ ಪ್ರಧಾನಿ ಮೋದಿ ಅವರ ಗಮನಕ್ಕೆ ಬಂದಿರಲಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದರೂ ತಮ್ಮ ಸಾಧನೆಯ ಬಗ್ಗೆ ಹೇಳಲು ಏನೂ ಇಲ್ಲದಿರುವುದು ಪ್ರಧಾನಿ ಮೋದಿ ಒಬ್ಬ ವಿಫಲ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದೆ. ಒಬ್ಬ ಅನಕ್ಷರಸ್ಥ ಮಾತ್ರ ಈ ರೀತಿಯ ಆಧಾರರಹಿತ ಆರೋಪಗಳನ್ನು ಮಾಡಲು ಸಾಧ್ಯ. ಪ್ರಧಾನಿ ಪ್ರದರ್ಶಿಸುತ್ತಿರುವ ಅಜ್ಞಾನವನ್ನು ನೋಡಿದರೆ ಇವರ ಪದವಿ ಶಿಕ್ಷಣದ ಬಗೆಗಿನ ಸಂಶಯಗಳು ನಿಜ ಇರುವಂತೆ ಕಾಣಿಸುತ್ತದೆ ಎಂದು ಟೀಕಿಸಿದ್ದಾರೆ.
ಮೋದಿ ಹೇಳಿಕೆ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಿದ್ದೇ ನಾನು ಎಂದು ಕೊಚ್ಚಿಕೊಳ್ಳುತ್ತಿದ್ದ ದೇವೇಗೌಡರು ಈಗಲೂ ತಮ್ಮ ನಿಲುವಿಗೆ ಬದ್ಧರಾಗಿ¨ªಾರಾ ಇಲ್ಲವೇ ಮೋದಿಯವರಿಗೆ ಶರಣಾಗಿ ತಮ್ಮ ಹಿಂದಿನ ನಿಲುವನ್ನು ಬದಲಾಯಿಸಿಕೊಳ್ಳುತ್ತಾರಾ ಎಂಬುದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
“3 ದಶಕಗಳಿಂದ ಮುಸ್ಲಿಮರು ಒಬಿಸಿಯಲ್ಲಿದ್ದಾರೆ’ರಾಜ್ಯ ಸರಕಾರ ಸ್ಥಾಪಿಸಿದ ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಗಮನಕ್ಕೆ ತೆಗೆದುಕೊಂಡು ಮುಸ್ಲಿಮರನ್ನು ಒಬಿಸಿ 2ಬಿ ವರ್ಗಕ್ಕೆ ಸೇರಿಸಲಾಗಿದೆ. 3 ದಶಕಗಳಿಂದ ಈ ಮೀಸಲಾತಿ ಜಾರಿಯಲ್ಲಿದೆ. ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರವಾಗಲಿ, 10 ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿ ಸರಕಾರವಾಗಲಿ ಈ ಮೀಸಲಾತಿಯನ್ನು ಪ್ರಶ್ನಿಸಿಲ್ಲ. ಬಿಜೆಪಿ ಸಹಿತ ಯಾರೂ ಇದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಿಲ್ಲ ಎಂದು ಸಿಎಂ ಹೇಳಿದ್ದಾರೆ.