Advertisement
ಇದು ಮಂಗಳವಾರ ದಾವೋಸ್‌ನಲ್ಲಿ ಪ್ರಧಾನಿ ಮೋದಿ ಜತೆಗಿನ ಚರ್ಚೆಯ ಬಳಿಕ ಪ್ರಮುಖ ಕಂಪನಿಗಳ ಸಿಇಒಗಳು ಆಡಿದ ಮೆಚ್ಚುಗೆಯ ಮಾತುಗಳು. ಭಾರತಕ್ಕೆ ಹೆಚ್ಚಿನ ರೀತಿಯಲ್ಲಿ ವಿದೇಶಿ ಬಂಡವಾಳ ಆಕರ್ಷಿಸಿ, ಕೈಗಾರಿಕೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಅವರು ಪ್ರಮುಖ ಕಂಪನಿಗಳ ಸಿಇಒ ಮತ್ತು ಇತರರ ಜತೆ ಮಾತುಕತೆ- ಸಂವಾದ ನಡೆಸಿದರು.
Related Articles
Advertisement
ಸ್ವಿಸ್ ಅಧ್ಯಕ್ಷರ ಭೇಟಿ: ಪ್ರಧಾನಿ ಮೋದಿ ಸ್ವಿಜರ್ಲೆಂಡ್ ಅಧ್ಯಕ್ಷ ಆ್ಯಲಿಯನ್ ಬರ್ಸೆಟ್ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ದ್ವಿಪಕ್ಷೀಯ ಸಂಬಂಧ ವೃದ್ಧಿಗೊಳಿಸುವ ಬಗ್ಗೆ ಉಭಯ ನಾಯಕರು ಮಾತನಾಡಿದರು.
ಕಾಂಗ್ರೆಸ್-ಬಿಜೆಪಿ ನಾಯಕರ ವಾಕ್ಸಮರದಾವೋಸ್ನಲ್ಲಿ ಪ್ರಧಾನಿ ಮೋದಿ ಭಾಷಣದ ನಂತರ ಕಾಂಗ್ರೆಸ್ ಮತ್ತು ಬಿಜೆಪಿ ವಾಕ್ಸಮರದಲ್ಲಿ ತೊಡಗಿವೆ. ಮೋದಿ ಭಾಷಣದ ಬೆನ್ನಲ್ಲೇ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, “ಭಾರತದಲ್ಲಿರುವ ಶೇ.73ರಷ್ಟು ಮಂದಿಯ ಸಂಪತ್ತು ಕೇವಲ ಶೇ.1ರಷ್ಟು ಮಂದಿಯ ಬಳಿ ಇದೆ ಎಂಬ ವಿಚಾರವನ್ನು ಭಾಷಣದಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸಬೇಕಾಗಿತ್ತು’ ಎಂದು ಲೇವಡಿ ಮಾಡಿದ್ದಾರೆ. “ಸನ್ಮಾನ್ಯ ಪ್ರಧಾನ ಮಂತ್ರಿಯವರೇ, ದೇಶದ ಶೇ.73ರಷ್ಟು ಮಂದಿಯ ಸಂಪತ್ತು ಶೇ.1ರಷ್ಟು ಮಂದಿ ಕೈಯ್ಯಲ್ಲಿ ಏಕೆ ಇದೆ ಎಂಬ ಬಗ್ಗೆ ಸ್ವಿಜರ್ಲೆಂಡ್ ಜನರಿಗೆ ತಿಳಿಸಿ. ನಿಮ್ಮ ಅವಗಾಹನೆಗಾಗಿ ಅದಕ್ಕೆ ಸಂಬಂಧಿಸಿದ ಮಾಧ್ಯಮ ವರದಿಯನ್ನೂ ಟ್ಯಾಗ್ ಮಾಡುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಇದೇ ವೇಳೆ, ರಾಹುಲ್ ಟ್ವೀಟ್‌ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ, “ದೇಶದ ಜನರನ್ನು ಶಾಶ್ವತವಾಗಿ ಬಡತನಕ್ಕೆ ನೂಕಿದ ಹೆಗ್ಗಳಿಕೆ ಕಾಂಗ್ರೆಸ್‌ನದ್ದು. ಜನರಲ್ಲಿ ಸಂಪತ್ತು ಸರಿಯಾಗಿ ಹಂಚಿಕೆಯಾಗದೇ ಇರುವುದರಲ್ಲಿ ನಿಮ್ಮ ಕುಟುಂಬದ ಕೊಡುಗೆಯೇ ಹೆಚ್ಚಾಗಿದೆ. ನೆಹರೂ ಕಾಂಗ್ರೆಸ್ ಜಾರಿ ಮಾಡಿದ ಆಡಳಿತದಿಂದಲೇ ಹೀಗಾಗಿದೆ. ಮೂರೂವರೆ ವರ್ಷಗಳ ಮೋದಿ ಸರ್ಕಾರದ ಆಡಳಿತದ ಅವಧಿಯಲ್ಲಿ ಎಲ್ಲರಿಗೂ ಸಮಾನವಾಗಿ ಅವಕಾಶ ನೀಡುವ ಪ್ರಯತ್ನ ನಡೆದಿದೆ’ ಎಂದು ಹೇಳಿದೆ. ಅಭಿವೃದ್ಧಿಯ ಐಡಿಯಾ ಹಂಚಿಕೊಳ್ಳಿ
ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳು ತಮ್ಮ ಐಡಿಯಾಗಳನ್ನು ಅಭಿವೃದ್ಧಿ ಹೊಂದುತ್ತಿರುವ ಅರ್ಥ ವ್ಯವಸ್ಥೆಗಳ ಜತೆ ಹಂಚಿಕೊಳ್ಳಬೇಕು. ವಿಶೇಷವಾಗಿ ಪಾಶ್ಚಿಮಾತ್ಯ ರಾಷ್ಟ್ರಗಳು ಈ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಆರ್‌ಬಿಐನ ನಿವೃತ್ತ ಗವರ್ನರ್ ಡಾ.ರಘುರಾಮ್ ರಾಜನ್ ಹೇಳಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿನ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ವೃದ್ಧಿಯಾಗಿರುವ ಹಿನ್ನೆಲೆಯಲ್ಲಿ ಅವರು ಅಭಿವೃದ್ಧಿ ಪಡಿಸಿದ ಉತ್ಪನ್ನಗಳಿಗೆ ಇತರ ಅರ್ಥ ವ್ಯವಸ್ಥೆಯಲ್ಲಿಯೇ ಮಾರುಕಟ್ಟೆ ಕಂಡುಕೊಳ್ಳಬೇಕಾಗಿದೆ. ಹೀಗಾಗಿ, ಇತ್ತೀಚಿನ ವರ್ಷಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವ ಅರ್ಥ ವ್ಯವಸ್ಥೆಯೇ ಹೆಚ್ಚಿನ ಪಾತ್ರ ವಹಿಸುತ್ತದೆ ಎಂದು ರಾಜನ್ ಹೇಳಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳು ಇತರೆಡೆಗೆ ಹೊಂದಿರುವ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.