ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶಿವಲಿಂಗದ ಮೇಲೆ ಕುಳಿತಿರುವ ಚೇಳು ಎಂದು ಆರ್‌ಎಸ್‌ಎಸ್ ನಾಯಕರೊಬ್ಬರ ಹಳೆಯ ಹೇಳಿಕೆಯನ್ನು ನೆನಪಿಸಿ ಕೇಂದ್ರದ ಮಾಜಿ ಸಚಿವ , ಕಾಂಗ್ರೆಸ್ ಸಂಸದ ಶಶಿ ತರೂರ್ ಟೀಕೆ ಮಾಡಿದ್ದಾರೆ.
ಬೆಂಗಳೂರು ಸಾಹಿತ್ಯೋತ್ಸವದಲ್ಲಿ ವಿವಿಧ ಗೋಷ್ಠಿಗಳು ಮತ್ತು ಚರ್ಚೆಗಳಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು 2012 ರಲ್ಲಿ ಹೆಸರು ಹೇಳದ ಆರ್‌ಎಸ್‌ಎಸ್ ನಾಯಕರೊಬ್ಬರ ಹಳೆಯ ಹೇಳಿಕೆಯನ್ನು ಉಲ್ಲೇಖೀಸಿ ಈ ಹೇಳಿಕೆ ನೀಡಿದ್ದಾರೆ.
ಸಭೆಯನ್ನುದ್ದೇಶಿಸಿ ಮಾತನಾಡಿದ ತರೂರ್ ಆರ್‌ಎಸ್‌ಎಸ್ ನಾಯಕರೊಬ್ಬರು ಮೋದಿಯನ್ನು ಶಿವಲಿಂಗದ ಮೇಲೆ ಕುಳಿತ ಚೇಳಿಗೆ ಹೋಲಿಸಿದ್ದರು. ಅದನ್ನು ಕೈಯಲ್ಲಿ ತೆಗೆಯಲು ಸಾಧ್ಯವಿಲ್ಲ, ಚಪ್ಪಲಿಯಿಂದಲೂ ತೆಗೆಯಲೂ ಸಾಧ್ಯವಿಲ್ಲ ಎಂದು ಹೋಲಿಕೆ ಮಾಡಿದ್ದರು ಎಂದು ಲೇವಡಿ ಮಾಡಿದ್ದಾರೆ.