Advertisement

IT ದಾಳಿ ಖಂಡಿಸಿ ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ; ಪೊಲೀಸ್ ಸರ್ಪಗಾವಲು

09:08 AM Mar 29, 2019 | Nagendra Trasi |

ಬೆಂಗಳೂರು: ಜೆಡಿಎಸ್, ಕಾಂಗ್ರೆಸ್ ಮುಖಂಡರ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಬುಧವಾರ ಅಹೋರಾತ್ರಿ ಧರಣಿಗೆ ಮುಂದಾಗಿದೆ.

Advertisement

ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪ್ರತ್ಯೇಕವಾಗಿ ಧರಣಿ ನಡೆಸುತ್ತಿದ್ದು, ತೊಲಗಲಿ, ತೊಲಗಲಿ ಬಿಜೆಪಿ ತೊಲಗಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರತಿಭಟನೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಮಂಡ್ಯ, ಹಾಸನ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಕಾಂಗ್ರೆಸ್, ಜೆಡಿಎಸ್ ಮುಖಂಡರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿ  ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next