Advertisement
ಈ ಕುರಿತು ಹೇಳಿಕೆ ನೀಡಿರುವ ಅವರು, ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರಧಾನಿಯವರು ಯಾಕೆ ಮೌನವಹಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಬರದಿಂದ ತತ್ತರಿಸುತ್ತಿರುವಾಗ 104 ಶಾಸಕರನ್ನು ದೆಹಲಿಯಲ್ಲಿ ಗುಡ್ಡೆ ಹಾಕಿಕೊಂಡು ಕೂರುವ ಅಗತ್ಯವೇನು?ದೆಹಲಿಗೆ ರಾಜ್ಯ ಬಿಜೆಪಿ ಶಾಸಕರನ್ನು ಕರೆದೊಯ್ದು ಹೋಟೆಲ್‌ನಲ್ಲಿ ಕೂಡಿ ಹಾಕಿರುವ ಮರ್ಮವೇನು ಎಂಬುದು ರಾಜ್ಯದ ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.