Advertisement

ಸಿದ್ದು ಅಪ್ಪನ ಆಣೆಗೂ ಮೋದಿಯೇ ಮುಂದಿನ ಪಿಎಂ

12:30 AM Feb 23, 2019 | Team Udayavani |

ಬೆಳಗಾವಿ: ಸಿದ್ದರಾಮಯ್ಯ ಅವರ ಅಪ್ಪನ ಆಣೆಗೂ ನರೇಂದ್ರ ಮೋದಿ ಅವರೇ ಮುಂದಿನ ಪ್ರಧಾನಿ ಆಗುತ್ತಾರೆ. ಇದು ನೂರಕ್ಕೆ ನೂರರಷ್ಟು ಖಚಿತ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದರು.

Advertisement

 ಪತ್ರಕರ್ತರ ಜತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುತ್ತಾರೆ. ಅವರ ಅಪ್ಪನಾಣೆಗೂ ಪ್ರಧಾನಿ ಆಗುವುದಿಲ್ಲ ಎಂದು ಟೀಕೆ ಮಾಡುತ್ತಾರೆ. ಆದರೆ ನಾನು ಹೇಳುತ್ತೇನೆ. ಸಿದ್ದರಾಮಯ್ಯ ಅವರ ಅಪ್ಪನಾಣೆಗೂ ನರೇಂದ್ರ ಮೋದಿ ಅವರೇ ಮುಂದಿನ ಪ್ರಧಾನಿ ಆಗುತ್ತಾರೆ. ಇದು ನನ್ನ ಅಪ್ಪನ ಆಣೆಯಲ್ಲ ಎಂದು ತಿರುಗೇಟು ನೀಡಿದರು.

 ಲೋಕಸಭೆ ಚುನಾವಣೆ ವೇಳೆ ನಿಮಗೆ ಬಿಜೆಪಿ ಟಿಕೆಟ್‌ ತಪ್ಪಿಸಲು ಪ್ರಯತ್ನಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ವಿಜಯಪುರದಲ್ಲಿ ನನ್ನ ಬಿಟ್ಟು ಬೇರೆ ಯಾರಿದ್ದಾರೆ. ಈ ಟಿಕೆಟ್‌ ತಪ್ಪಿಸುವ ವಿಚಾರ ನನಗೆ ಗೊತ್ತಿಲ್ಲ.  ನಾನು ಮತ್ತೆ ಗೆದ್ದು ಬರುತ್ತೇನೆ, ಮತದಾರರು ನನ್ನನ್ನೇ ಗೆಲ್ಲಿಸುವ ವಿಶ್ವಾಸವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next