ಮಸ್ಕಿ: ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ಇಡೀ ವಿಶ್ವವೇ ಅವರನ್ನು ಮೆಚ್ಚಿಕೊಂಡಿದೆ. ದೇಶದಲ್ಲಿ ಐಕ್ಯತೆ ಹಾಗೂ ಭದ್ರತೆ ದೃಷ್ಠಿಯಿಂದ ಬಿಜೆಪಿ ಅಧಿಕಾರದಲ್ಲಿರಬೇಕಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಪಟ್ಟಣದಲ್ಲಿ ಪುರಸಭೆ ಚುನಾವಣೆ ನಿಮಿತ್ತ ವಿವಿಧ ಬಡಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿ ಮಾತನಾಡಿದರು.
ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನಪರ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಸಾಧನೆಗಳು ಮಸ್ಕಿ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಹಕಾರಿಯಾಗಿದೆ ಎಂದರು.
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ಕಳೆದ ಮೂರು ಅವಧಿಯಲ್ಲಿ ಶಾಸಕನಾಗಿದ್ದಾಗ ಮಸ್ಕಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಲಾಗಿದೆ. ಶಾಶ್ವತ ಕುಡಿವ ನೀರಿನ ಯೋಜನೆ, ಬಡವರಿಗೆ ಮನೆಗಳು, ರಸ್ತೆ, ಚರಂಡಿ ನಿರ್ಮಾಣ ಸೇರಿ ಮೂಲ ಸೌಕರ್ಯ ಆದ್ಯತೆ ನೀಡಲಾಗಿದೆ. ಬಡವರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಆದರೂ ಉಪಚುನಾವಣೆಯಲ್ಲಿ ಸೋಲಾಗಿದೆ. ಇದನ್ನು ಮರೆತು ನಾವು ಮತ್ತೂಮ್ಮೆ ಮಸ್ಕಿ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಮತದಾರರು ಇದಕ್ಕೆ ಪೂರಕವಾಗಿ ಬಿಜೆಪಿ ಎಲ್ಲ ಅಭ್ಯರ್ಥಿಗಳಿಗೆ ವೋಟ್ ಹಾಕುವ ಮೂಲಕ ಬೆಂಬಲಿಸಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಡಾ| ಬಿ.ಎಚ್, ದಿವಟರ್, ಬಸನಗೌಡ ಪೊಲೀಸ್ ಪಾಟೀಲ್, ಉಮಕಾಂತಪ್ಪ ಸಜ್ಜನ್, ದೊಡ್ಡಪ್ಪ ಕಡಬೂರು, ಎಂ. ಪ್ರಭುದೇವ್, ನಿವೃತ್ತ ಶಿಕ್ಷಕ ಯಲ್ಲಪ್ಪ ಜಾಲಿಹಾಳ, ಬಿಜೆಪಿ ಎಸ್ಸಿ ಮೋರ್ಚದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸವ ವಕೀಲ್, ಕಿರಣ್ ಸಾನಬಾಳ, ಅಭಿಜಿತ್ ಪಾಟೀಲ್, ಮಲ್ಲಿಕಾರ್ಜುನ ಬೈಲಗುಡ್ಡ ಇದ್ದರು.