ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರಿಗೂ ಗೌರವ ಕೊಡುವುದಿಲ್ಲ, ಕಾಂಗ್ರೆಸ್ ಪ್ರಧಾನಿಯಾದವರಿಗೂ ಗೌರವ ಕೊಟ್ಟಿಲ್ಲ. ನೀವು ಗೌರವ ಕೊಡುವುದನ್ನೇ ಕಲಿತಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಕುಟುಕಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಿಂದ ಪ್ರಧಾನಿ ನರೇಂದ್ರ ಮೋದಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರಿಯಾಗಿ ಮಾತನಾಡು ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಪತ್ರ ಬರೆದು ರಾಹುಲ್ ಗಾಂಧಿಗೆ ಬುದ್ಧಿ ಹೇಳಿದ್ದಾರೆ. ದೇಶದ ಸಮಗ್ರತೆ ವಿಚಾರ ಬಂದಾಗ ಸರಿಯಾಗಿ ಮಾತನಾಡಬೇಕು. ನೀವು ನಿಮ್ಮ ಪಕ್ಷದ ಪ್ರಧಾನಿಗಳಿಗೆ ಸರಿಯಾದ ಗೌರವ ಕೊಟ್ಟಿಲ್ಲ. ಮನಮೋಹನ್ ಸಿಂಗ್, ನರಸಿಂಹರಾವ್ ಅವರನ್ನು ನೀವು ಹೇಗೆ ನಡೆಸಿಕೊಂಡಿರಿ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.
ಪದ ಪ್ರಯೋಗ ಸಲ್ಲದು: ಪ್ರಧಾನಿ ನರೇಂದ್ರಮೋದಿ ಮೇಲೆ ವಿಪಕ್ಷ ನಾಯಕರ ಪದ ಪ್ರಯೋಗವನ್ನು ದೇಶದ ಜನರು ಮೆಚ್ಚುವುದಿಲ್ಲ. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಕೂಡ ಮೋದಿಯನ್ನು ಟೀಕಿಸಿದ್ದಾರೆ. ಪ್ರಧಾನಿ ಮೇಲೆ ವಿಪಕ್ಷಗಳು ಮಾಡಿರುವ ಪದ ಪ್ರಯೋಗ ದೇಶದ ಜನರು ಮೆಚ್ಚುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ಸಾಧನೆ ಏನು? ಮೋದಿ ಸಾಧನೆ ಏನು? ಮನಗಾಣಬೇಕು. ದೊಡ್ಡ ದೊಡ್ಡವರೆಲ್ಲಾ ಅಪ್ರಬುದಟಛಿರಾಗಿ ಮಾತಾಡುತ್ತಿದ್ದಾರೆ. ನಾನು ದೇವರಾಜ ಅರಸ್ ಅವರನ್ನು ಮೋದಿಯಲ್ಲಿ ಕಾಣುತ್ತಿದ್ದೇನೆ. ಅಹಿಂದ ಪ್ರಧಾನಿಯನ್ನು ಈ ರೀತಿ ಟೀಕೆ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ಅನ್ನಭಾಗ್ಯ ನಿಮ್ಮ ಕಲ್ಪನೆಯಲ್ಲ: ಅನ್ನಭಾಗ್ಯದ ಕಲ್ಪನೆಯನ್ನು ನಿಮಗೆ ಕೊಟ್ಟಿದ್ದು ನಾನೇ, ಅದು ಕೂಡ ನಿಮ್ಮ ಸಾಧನೆಯಲ್ಲ. ಪ್ರಧಾನಿ ವಿರುದಟಛಿ ದಾಖಲೆ ಇದ್ದರೆ ಬಿಡುಗಡೆ ಮಾಡಿ, ಅದುಬಿಟ್ಟು, ಇಲ್ಲಸಲ್ಲದ ಹೇಳಿಕೆ ನೀಡಿ, ಹಿಟ್ ಅಂಡ್ ರನ್ ಮಾಡಬೇಡಿ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದಟಛಿ ಆರೋಪ ಇದ್ದರೆ ದಾಖಲೆ ಕೊಡಿ. ಸುಮ್ಮನೆ ಮಾತಾಡಬೇಡಿ ಎಂದು ವಿಶ್ವನಾಥ್ ಎಚ್ಚರಿಸಿದರು.
ಎಂಎಲ್ಸಿ ಮಾಡಲು ತೊಡಕಿಲ್ಲ: ರಾಜ್ಯದಲ್ಲಿ ಎರಡು ಪ್ರತಿರೋಧದ ಪಕ್ಷಗಳು ಸೇರಿಕೊಂಡು ಸರ್ಕಾರ ರಚಿಸಿದ್ದೇ ಬ್ಲಿಂಡರ್. ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿದ ಕ್ರಮವನ್ನು ಬ್ಲಿಂಡರ್ ಎಂದು ಟೀಕಿಸಿದ ವಿಶ್ವನಾಥ್, ನನಗೆ ಎಂಎಲ್‌ಸಿ ಸ್ಥಾನ ಸಿಗದಿದ್ದರೆ ಆಕಾಶಕ್ಕೂ ಹೋಗುವುದಿಲ್ಲ, ಪಾತಾಳಕ್ಕೂ ಹೋಗುವುದಿಲ್ಲ. ವಿಶ್ವನಾಥ್ ವಿಶ್ವನಾಥನಾಗೆ ಇರುವೆ. ನನಗೆ ವಿಧಾನ ಪರಿಷತ್ ಸ್ಥಾನ ನೀಡಲು ಯಾವುದೇ ರೀತಿಯ ಕಾನೂನು ತೊಡಕಿಲ್ಲ ಎಂದು ಹೇಳಿದರು.