ಹಾಸನ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸುವಲ್ಲಿ ಭಾರೀ ಗೊಂದಲ ಮುಂದುವರೆದಿದ್ದು, ಇದಕ್ಕೆ ಸಾಕ್ಷಿಯಾಗಿ ಚನ್ನರಾಯಪಟ್ಟಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮೋದಿ, ಮೋದಿ ಎಂಬ ಘೋಷಣೆಗಳು ಮೊಳಗಿವೆ.
ಕಾಂಗ್ರೆಸ್ ನಾಯಕ ಪುಟ್ಟೇಗೌಡರ ಮನೆಯಲ್ಲಿ ನಡೆದ ಸಭೆಯಲ್ಲಿ ಹಲವು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಬಹಿರಂಗ ಆಕ್ರೋಶ ಹೊರ ಹಾಕಿದ್ದು, ನಾಯಕರ ಎದುರಲ್ಲೇ ಮೋದಿ ಪರ ಘೋಷಣೆಗಳನ್ನು ಕೂಗಿದ್ದಾರೆ.
ಜಿಲ್ಲೆಯ ಹಲವೆಡೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಇದೇ ಪರಿಸ್ಥಿತಿ ಎದುರಾಗಿದ್ದು , ಕಾಂಗ್ರೆಸ್ ಕಾರ್ಯಕರ್ತರು ಬೆಂಬಲಿಸುವುದಿಲ್ಲ ಎಂದು ಬಹಿರಂಗ ವಾಗಿ ಆಕ್ರೋಶ ಹೊರ ಹಾಕಿದ್ದಾರೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಅಭ್ಯರ್ಥಿಯಾಗಿ ಕಣದಲ್ಲಿರುವ ಎ.ಮಂಜು ಅವರೇ ಈ ಗೊಂದಲಗಳನ್ನು ಮಾಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಹೇಳಿಕೊಳ್ಳುತ್ತಿದ್ದಾರೆ.