Advertisement

ದೇವೇಗೌಡರಿಗೆ ಮೋದಿ,ರಾಹುಲ್‌ ಶುಭಾಶಯ

08:00 AM May 19, 2018 | |

ನವದೆಹಲಿ: ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆಯುತ್ತಿರುವ ನಡುವೆಯೇ, ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಶುಕ್ರವಾರ 86ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರಿಗೆ ಪ್ರಧಾನಿ ಮೋದಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ,”ಮಾಜಿ ಪ್ರಧಾನಿ ದೇವೇಗೌಡರ ಜೊತೆ ಮಾತನಾಡಿದೆ,ಹುಟ್ಟು ಹಬ್ಬದ ಶುಭಾಶಯ ಕೋರಿದೆ. ಅವರ ಉತ್ತಮ ಆರೋಗ್ಯ ಮತ್ತ ಸುದೀರ್ಘ‌ ಆಯುಷ್ಯಕ್ಕಾಗಿ ನಾನು ದೇವರಲ್ಲಿ ಪ್ರಾರ್ಥಿಸಿದೆ’ ಎಂದು ಹೇಳಿದ್ದಾರೆ. ಇದೇ ವೇಳೆ, ಶುಕ್ರವಾರ ದೇವೇಗೌಡ ಅವರು ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next