Advertisement

ಇಂದು ಹುಬ್ಬಳ್ಳಿಗೆ ಪ್ರಧಾನಿ ಮೋದಿ;ಲಕ್ಷಾಂತರ ಜನರು ಸೇರುವ ನಿರೀಕ್ಷೆ

12:49 AM Feb 10, 2019 | |

ಹುಬ್ಬಳ್ಳಿ:  ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿಯ ರಣಭೇರಿ ಹುಬ್ಬಳ್ಳಿಯಿಂದ ಮಾರ್ದನಿ ಸಲಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಗೊಂದಲ, ಆಡಳಿತ ಪಕ್ಷದ ಕೆಲ ಶಾಸಕರ ಭಿನ್ನಮತ, ಬಿಜೆಪಿ ರಾಜ್ಯಾಧ್ಯಕ್ಷರ ಆಪರೇಷನ್‌ ಕಮಲದ ಆಡಿಯೋ ರಾದ್ಧಾಂತ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಉತ್ತರದ ನೆಲದಿಂದ ಇಂದು(ಭಾನುವಾರ) ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.

Advertisement

ಕಳೆದ ವಿಧಾನಸಭೆ ಚುನಾವಣೆ ವೇಳೆ ಪ್ರಚಾರದ ಕೊನೇ ಹಂತದಲ್ಲಿ ಹುಬ್ಬಳ್ಳಿಗೆ ಪ್ರಚಾರಕ್ಕೆಂದು ಬಂದಿದ್ದ ಮೋದಿ, ಇದೀಗ ಲೋಕಸಭಾ ಚುನಾವಣಾ ಪ್ರಚಾರ ಆರಂಭಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿ ಸ್ವಾಗತಕ್ಕೆ ವಾಣಿಜ್ಯ ನಗರಿ ಸಜ್ಜುಗೊಂಡಿದ್ದು, ಪ್ರಧಾನಿ ಭಾಷಣ ಆಲಿಸಲು ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದೆ.

ಮೋದಿ ಕೈಗೊಳ್ಳಲಿರುವ ಲೋಕಸಭಾ ಚುನಾವಣಾ ಪ್ರಚಾರಾರ್ಥ ಸಭೆಗಾಗಿ ಇಲ್ಲಿನ ಬಿಡನಾಳ-ಗಬ್ಬೂರು ಬಳಿಯ ಜಾಗದಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಸಮಾವೇಶಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಧಾರ ವಾಡ, ಹಾವೇರಿ ಹಾಗೂ ಕೆನರಾ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರು, ಬಿಜೆಪಿ ಕಾರ್ಯಕರ್ತ ರನ್ನುದ್ದೇಶಿಸಿ ಪ್ರಧಾನಿ ಭಾಷಣ ಮಾಡಲಿದ್ದಾರೆ.

ಮೊಳಗಲಿದೆ ರಣಕಹಳೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೋದಿ ಪ್ರಚಾರಾಂದೋಲನಕ್ಕೆ ಚಾಲನೆ ನೀಡಲು ಹುಬ್ಬಳ್ಳಿಯನ್ನು ಆಯ್ಕೆ ಮಾಡಿಕೊಂಡಿದ್ದರ ಹಿಂದೆ ಹಲವು ರಾಜಕೀಯ ಲೆಕ್ಕಾಚಾರವಿದೆ ಎಂದು ಹೇಳಲಾಗುತ್ತಿದೆ. ಹುಬ್ಬಳ್ಳಿ, ಉತ್ತರ ಕರ್ನಾಟಕದ ಕೇಂದ್ರ ಸ್ಥಳವಾಗಿದ್ದರೆ, ಮುಂಬೈ ಕರ್ನಾಟಕ ಬಿಜೆಪಿಗೆ ಭದ್ರ ನೆಲೆ ಒದಗಿಸುವ ತಾಣವಾಗಿದೆ. ಈ ಭಾಗದ ಪ್ರಬಲ ಲಿಂಗಾಯತ ಸಮುದಾಯದ ಮತಗಳ ಮೇಲಿನ ಕಣ್ಣು ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಮುಂಬೈ ಕರ್ನಾಟಕದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಚಿಕ್ಕೋಡಿ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ ಗೆದ್ದಿದ್ದರೆ, ಉಳಿದ ಆರು ಕ್ಷೇತ್ರಗಳಾದ ಬೆಳಗಾವಿ, ಕೆನರಾ, ಧಾರವಾಡ, ಹಾವೇರಿ, ಬಾಗಲಕೋಟೆ, ವಿಜಯಪುರ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಹೈ-ಕದ ಐದು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬೀದರ, ಕೊಪ್ಪಳಗಳಲ್ಲಿ ಪ್ರಾತಿನಿಧ್ಯ ಹೊಂದಿದೆ. ಈ ಹಿಂದೆ ಬಳ್ಳಾರಿಯಲ್ಲೂ ಗೆದ್ದಿತ್ತಾದರೂ ಶಾಸಕ ಶ್ರೀರಾಮುಲು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಬಳ್ಳಾರಿ ಕ್ಷೇತ್ರ ವಶಪಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಲೋಕ ಸಭಾ ಚುನಾವಣೆಗೆ 20-22 ಸ್ಥಾನಗಳ ಮೇಲೆ ಕಣ್ಣಿಟ್ಟಿ ರುವ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ರಣತಂತ್ರಕ್ಕೆ ಮುಂದಾಗಿದೆ. 2014ರಲ್ಲಿ ಗೆದ್ದ ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳುವುದರ ಜತೆಗೆ ಇನ್ನಷ್ಟು ಸ್ಥಾನಗಳನ್ನು ಕಸಿದುಕೊಳ್ಳುವ ಯತ್ನದಲ್ಲಿದೆ.

Advertisement

ಭಾವನಾತ್ಮಕ ಕಾರಣ: ಮೋದಿ ರಾಜ್ಯದಲ್ಲಿ ಲೋಕಸಭಾ ಪ್ರಚಾರವನ್ನು ಹುಬ್ಬಳ್ಳಿಯಿಂದ ಆರಂಭಿಸುವುದಕ್ಕೆ ಬಿಜೆಪಿ ಮೂಲಗಳ ಪ್ರಕಾರ ಭಾವನಾತ್ಮಕ ಕಾರಣಗಳೂ ಇವೆ. ವಾಜಪೇಯಿ, ಅಡ್ವಾಣಿ ಅವರಿಂದ ಮೋದಿಯವರೆಗೆ ಪಕ್ಷದ ರಾಷ್ಟ್ರೀಯ ನಾಯಕರು ಹುಬ್ಬಳ್ಳಿಯಲ್ಲಿ ಕೈಗೊಂಡ ಕಾರ್ಯಕ್ರಮಗಳು ಸಾಕಷ್ಟು ಯಶಸ್ಸು ನೀಡಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದಲೇ ಈ ಬಾರಿಯ ಪ್ರಚಾರವನ್ನು ರಾಜ್ಯದಲ್ಲಿ ಆರಂಭಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

2014ರ ಲೋಕಸಭಾ ಚುನಾವಣೆ ವೇಳೆ ಮೋದಿ ಯವರು ಹುಬ್ಬಳ್ಳಿ ಸಮಾವೇಶದಲ್ಲಿ, ನಂತರ ಬೆಳಗಾವಿ ಯಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದು ಮಹತ್ತರ ಪರಿಣಾಮ ಬೀರಿತ್ತು ಎಂಬುದು ಬಿಜೆಪಿ ಯವರ ಅನಿಸಿಕೆ. 2014ರ ಲೋಕಸಭೆ ಚುನಾವಣೆ ವೇಳೆ ಈ ಭಾಗದಲ್ಲಿ ತಮ್ಮದೇ ಮೋಡಿ ಮಾಡಿದ್ದ ಮೋದಿ, ಈ ಬಾರಿಯ ಚುನಾವಣೆಯಲ್ಲಿ ಅದ್ಯಾವ ಜಾದು ಮಾಡಲಿದ್ದಾರೆ ಕಾದು ನೋಡಬೇಕು.

ವಿಪಕ್ಷಗಳ ತಕರಾರು: ಮೋದಿಯವರು ಚುನಾವಣೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲು ಬರುವ ಸಂದ ರ್ಭದಲ್ಲೇ ಐಐಟಿ, ಐಐಐಟಿಗಳ ಕಟ್ಟಡಗಳಿಗೆ ಶಂಕು ಸ್ಥಾಪನೆ ಸೇರಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆಯ ಸರ್ಕಾರಿ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡಿರುವುದು ವಿಪಕ್ಷಗಳ ಆಕ್ಷೇಪಕ್ಕೆ ಕಾರಣವಾಗಿದೆ.

— ಅಮರೇಗೌಡ ಗೋನವಾರ

Advertisement

Udayavani is now on Telegram. Click here to join our channel and stay updated with the latest news.

Next