Advertisement

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

08:26 PM Jun 13, 2024 | Team Udayavani |

ಹೊಸದಿಲ್ಲಿ: ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ದಾಳಿ ಸೇರಿದಂತೆ ಉಗ್ರ ಘಟನೆಗಳ ನಂತರ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ “ಭಯೋತ್ಪಾದನಾ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿಯನ್ನು” ನಿಯೋಜಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದರು. ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ, ಭದ್ರತಾ ಪಡೆಗಳ ನಿಯೋಜನೆ ಮತ್ತು ಉಗ್ರರ ನಿಗ್ರಹ ಕಾರ್ಯಾಚರಣೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಸರಕಾರಿ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿ ಕೇಂದ್ರಾಡಳಿತ ಪ್ರದೇಶದ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಸಿನ್ಹಾ ಅವರಿಗೆ ಸ್ಥಳೀಯ ಆಡಳಿತ ಕೈಗೊಂಡಿರುವ ಪ್ರಯತ್ನಗಳ ಕುರಿತು ವಿವರಿಸಿದರು.

ಸಭೆಯಲ್ಲಿ, ಪ್ರದೇಶದ ಭದ್ರತೆಗೆ ಸಂಬಂಧಿಸಿದ ಪರಿಸ್ಥಿತಿಯ ಸಂಪೂರ್ಣ ಅವಲೋಕನವನ್ನು ಪ್ರಧಾನ ಮಂತ್ರಿಗೆ ನೀಡಲಾಯಿತು ಮತ್ತು ಭಯೋತ್ಪಾದನೆ ನಿಗ್ರಹದ ಪ್ರಯತ್ನಗಳ ಬಗ್ಗೆ ತಿಳಿಸಲಾಗಿದೆ.

ಸ್ಥಳೀಯರಿಗೆ ಎಚ್ಚರಿಕೆ
ಒಂದಾದ ಮೇಲೆ ಒಂದು ನಾಲ್ಕು ಭಯೋತ್ಪಾದಕ ದಾಳಿಗಳ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ಆರ್.ಆರ್. ಸ್ವೈನ್ ಗುರುವಾರ, ‘ಪಾಕಿಸ್ಥಾನವು ಶಾಂತಿಯುತ ವಾತಾವರಣವನ್ನು ಕದಡಲು ಪ್ರಯತ್ನಿಸುತ್ತಿದೆ. ಭಾರತೀಯ ಪಡೆಗಳು ಶತ್ರುಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ನಿರ್ಧರಿಸಲಾಗಿದೆ’ ಎಂದು ಹೇಳಿಕೆ ನೀಡಿದ್ದಾರೆ.

Advertisement

‘ಭಯೋತ್ಪಾದನೆಯನ್ನು ಬೆಂಬಲಿಸುವ ನಿರ್ಧಾರ ಪಶ್ಚಾತ್ತಾಪ ಪಡುವಂತೆ ಮಾಡುತ್ತದೆ ಎಂದು ಉಗ್ರ ಏಜೆಂಟ್ ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ಥಾನಿ ಭಯೋತ್ಪಾದಕರು ಕಳೆದುಕೊಳ್ಳಲು ಏನೂ ಇಲ್ಲ, ಸ್ಥಳೀಯರು ಕುಟುಂಬ, ಭೂಮಿ ಮತ್ತು ಉದ್ಯೋಗಗಳನ್ನು ಒಳಗೊಂಡಂತೆ ಪಾಲನ್ನು ಹೊಂದಿದ್ದಾರೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next