Advertisement

“ಮೋದಿಗೆ ಸೋಲಿನ ಭೀತಿ’

10:49 AM Apr 03, 2019 | Team Udayavani |

ಮಂಗಳೂರು: ನರೇಂದ್ರ ಮೋದಿಗೆ ಸೋಲಿನ ಭೀತಿ ಕಾಡುತ್ತಿದ್ದು, ತನ್ನ ಆಡಳಿತ ವೈಫಲ್ಯಗಳನ್ನು ಮರೆಮಾಚಲು ಚುನಾ ವಣೆಯಲ್ಲಿ ಭಾವನಾತ್ಮಕ ವಿಚಾರಗಳನ್ನು ಪ್ರಸ್ತಾವಿ ಸುತ್ತಾ ಭ್ರಮೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಟೀಕಿಸಿದ್ದಾರೆ.

Advertisement

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೋದಿ ತನ್ನ ವೈಫಲ್ಯ ಮುಚ್ಚಿಹಾಕಲು ವಿಷಯಾಂತರ ಮಾಡು ತ್ತಿದ್ದಾರೆ ಎಂದರು.

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಅನೇಕ ಕ್ರಾಂತಿಕಾರಿ ಯೋಜನೆಗಳನ್ನು ಪ್ರಕಟಿಸಿದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ದೊಡ್ಡ ಪಕ್ಷವಾಗಿ ಮೂಡಿ ಬರಲಿದೆ ಮತ್ತು ರಾಹುಲ್‌ ಗಾಂಧಿ ಪ್ರಧಾನಿ ಆಗಲಿದ್ದಾರೆ ಎಂದರು. ರಾಹುಲ್‌ ಗಾಂಧಿ ಕರಾವಳಿಯಲ್ಲೂ ಪ್ರಚಾರ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

ಪರಿವರ್ತನೆಯ ವಾತಾವರಣ
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಪರ ಒಲವು ವ್ಯಕ್ತವಾಗುತ್ತಿದ್ದು, ಪರಿವರ್ತನೆಯ ವಾತಾವರಣ ನಿರ್ಮಾಣವಾಗಿದೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು. ಸಚಿವ ಯು.ಟಿ. ಖಾದರ್‌, ಕೆ. ಹರೀಶ್‌ ಕುಮಾರ್‌, ಕಾಂಗ್ರೆಸ್‌ ಮೈಸೂರು ವಿಭಾಗದ ಉಸ್ತುವಾರಿ ವಿಷ್ಣುನಾಥ್‌, ಮಾಜಿ ಶಾಸಕ ಜೆ.ಆರ್‌. ಲೋಬೋ, ಅಭ್ಯರ್ಥಿ ಮಿಥುನ್‌ ರೈ, ಕೆಪಿಸಿಸಿ ಉಪಾಧ್ಯಕ್ಷ ಜಿ.ಎ. ಬಾವಾ, ಪ್ರ. ಕಾರ್ಯದರ್ಶಿ ಕಳ್ಳಿಗೆ ತಾರಾನಾಥ ಶೆಟ್ಟಿ, ಎ.ಸಿ. ವಿನಯ ರಾಜ್‌ ಉಪಸ್ಥಿತರಿದ್ದರು.

ಸಂತಸ ತಂದಿದೆ
ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಹುಲ್‌ ಗಾಂಧಿಗೆ ಮನವಿ ಮಾಡಿದ್ದೆವು. ಅವರು ವಯನಾಡ್‌ನಿಂದ ಸ್ಪರ್ಧಿಸಲು ಬಯಸಿದ್ದಾರೆ. ಮುಂದಿನ ಪ್ರಧಾನಿ ದಕ್ಷಿಣ ಭಾರತದಿಂದ ಆಗುತ್ತಿದ್ದಾರೆ ಎಂಬುದು ಸಂತೋಷದ ವಿಚಾರ ಎಂದು ದಿನೇಶ್‌ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next