ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 30 ಸಾವಿರ ಹಿಂದೂ ಕಾರ್ಯಕರ್ತರನ್ನು ರೌಡಿ ಪಟ್ಟಿಗೆ ಸೇರಿಸಿ ಹಿಂದೂ ಹೋರಾಟಗಾರರನ್ನು ಹತ್ತಿಕ್ಕುವ ಪ್ರಯತ್ನ ಮಾಡಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರಿಮಿನಲ್ ಹಿನ್ನೆಲೆಯುಳ್ಳ ಯಾರನ್ನೂ ರೌಡಿಲಿಸ್ಟ್‌ನಿಂದ ಕೈ ಬಿಟ್ಟಿಲ್ಲ. ರಾಜಕೀಯ ಕಾರಣಗಳಿಗಾಗಿ ಅಮಾಯಕರನ್ನು, ನಿರಪರಾ ಧಿಗಳನ್ನು ರೌಡಿಪಟ್ಟಿಯಿಂದ ಕೈ ಬಿಡಲಾಗಿದೆ. ಅವರನ್ನು ಬಿಜೆಪಿ ಚುನಾವಣೆ ಸಂದರ್ಭದಲ್ಲಿ ಬಳಸಿಕೊಳ್ಳಲು ಇಂತಹ ತೀರ್ಮಾನ ಕೈಗೊಂಡಿದೆ ಎಂಬುದು ಸುಳ್ಳು.
ಕಾಂಗ್ರೆಸ್ ಸರಕಾರದಲ್ಲಿ ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕಲು ಅವರನ್ನು ರೌಡಿ ಲಿಸ್ಟ್‌ಗೆ ಸೇರಿಸಲಾಗಿತ್ತು. ಕಾಂಗ್ರೆಸ್‌ನಲ್ಲಿ ರಾಷ್ಟ್ರೀಯ ನಾಯಕರೇ ಇಲ್ಲ. ನರೇಂದ್ರ ಮೋದಿ, ಅಮಿತ್ ಶಾ ರಾಜ್ಯಕ್ಕೆ ಬಂದರೆ ಕಾಂಗ್ರೆಸ್ಸಿಗರು ಭಯ ಪಡುತ್ತಾರೆ. ಕಾಂಗ್ರೆಸ್ಸಿಗರು ಹತಾಶರಾಗಿ ಟೀಕೆ ಮಾಡುತ್ತಿದ್ದಾರೆ ಎಂದರು.