Advertisement

ಮೋದಿ, ಶಾ ಪ್ರವಾಸ ಫಿಕ್ಸ್‌

09:41 AM Apr 05, 2019 | mahesh |

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರು ಕಡೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಏಳು ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ಅರವಿಂದ ಲಿಂಬಾವಳಿ, ಏ.8ರಂದು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿಯವರು ಚಿತ್ರದುರ್ಗ, ಮೈಸೂರಿನಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.  ಏ.13ರಂದು ಮಂಗಳೂರು, ಬೆಂಗಳೂರು ಹಾಗೂ ಏ.18ರಂದು ಚಿಕ್ಕೋಡಿ, ಗಂಗಾವತಿಯಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.

Advertisement

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್‌ ಶಾ ಅವರು ಏ. 10, 12, 17 ಹಾಗೂ 20ರಂದು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆ, ಹಾಸನ, ತುಮಕೂರು, ಕೋಲಾರ, ಕಲಬುರಗಿ, ವಿಜಯಪುರ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದು,
ಸ್ಥಳ, ಸಮಯ ಇನ್ನಷ್ಟೇ ನಿಗದಿಯಾಗಬೇಕಿದೆ ಎಂದು ತಿಳಿಸಿದರು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ಏ.15ರಂದು ಬೆಂ.ಗ್ರಾಮಾಂತರ, ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದರು.

ತೇಜಸ್ವಿನಿ ಉಪಾಧ್ಯಕ್ಷೆ
ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರದಿಂದ ಟಿಕೆಟ್‌ ಕೈತಪ್ಪಿದ್ದರಿಂದ ಬೇಸರಗೊಂಡಿದ್ದ ತೇಜಸ್ವಿನಿ ಅನಂತ ಕುಮಾರ್‌ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಟ್ವಿಟರ್‌ ನಲ್ಲಿ ಪ್ರಕಟಿ ಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ
ಅವರು “ತೇಜಸ್ವಿನಿ ಅನಂತ ಕುಮಾರ್‌ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕವಾಗಿರುವುದನ್ನು ಪ್ರಕಟಿಸಲು ನನಗೆ ಸಂತೋಷವಾಗುತ್ತಿದೆ. ಅವರಿಗೆ ಆಲ್‌ ದಿ ವೆರಿ ಬೆಸ್ಟ್‌’ ಎಂದು ಹೇಳಿದ್ದಾರೆ.

ಪ್ರಚಾರ ವಿವರ
ಏ.8 ಮಧ್ಯಾಹ್ನ 1ಕ್ಕೆ ಚಿತ್ರದುರ್ಗ, ಸಂಜೆ 3 ಗಂಟೆಗೆ ಮೈಸೂರು ಏ.13 ಬೆಳಗ್ಗೆ ಮಂಗಳೂರು, ಸಂಜೆ ಬೆಂಗಳೂರು ಏ.18 ಬೆಳಗ್ಗೆ ಚಿಕ್ಕೋಡಿ, ಸಂಜೆ ಗಂಗಾವತಿ ಅಮಿತ್‌ ಶಾ ಪ್ರಚಾರ ವಿವರ ಅಮಿತ್‌ ಶಾ ಅವರು ಏ. 10, 12, 17 ಹಾಗೂ 20ರಂದು ಪ್ರಚಾರ ಸಭೆ. ದಾವಣಗೆರೆ, ಹಾಸನ, ತುಮಕೂರು, ಕೋಲಾರ, ಕಲಬುರಗಿ, ವಿಜಯಪುರ, ಧಾರವಾಡ ಕ್ಷೇತ್ರದಲ್ಲಿ ಪ್ರಚಾರ.

Advertisement

Udayavani is now on Telegram. Click here to join our channel and stay updated with the latest news.

Next