ಮುಂದಕ್ಕೆ ಹೋಗುವ ಸಾಧ್ಯತೆಯಿದೆ.
Advertisement
ಆಗಸ್ಟ್ ಕೊನೆಯ ವಾರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ರಾಜ್ಯ ಪ್ರವಾಸ ನಿಗದಿಯಾಗಿತ್ತಾದರೂನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 3ನೇ ವಾರಕ್ಕೆ ಮುಂದೂಡಿಕೆಯಾಗಬಹುದು ಎಂದು ಹೇಳಲಾಗಿದೆ.
ಚುನಾವಣೆಗೆ ಚಾಲನೆ ನೀಡಲು ಬಿಜೆಪಿ ತೀರ್ಮಾನಿಸಿತ್ತು. ಅದಕ್ಕೆ ಮುಂಚೆ ಅಮಿತ್ ಶಾ ಭೇಟಿಯ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಅಮಿತ್ ಶಾ ಭೇಟಿ ಮುಂದೂಡಲಾಗಿತ್ತು. ನಂತರ ನರೇಂದ್ರ ಮೋದಿಯವರ ಕಾರ್ಯಕ್ರಮ ನಿಗದಿಯಾಗಿತ್ತಾದರೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಗದಿಯಾಗಿರುವುದರಿಂದ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಬರಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.