Advertisement

ದೇಶ ಗೆಲ್ಲಬೇಕಾದರೆ ಮೋದಿ ಮತ್ತೆ ಪ್ರಧಾನಿಯಾಗಲಿ: ರವಿ

11:52 AM Mar 15, 2019 | |

ಶಿವಮೊಗ್ಗ: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕೆಂಬುದು ದೇಶದ ಜನರ ಬಯಕೆ. ರಾಜ್ಯದಲ್ಲೂ 1998ರಿಂದಲೂ ನಂ.1 ಸ್ಥಾನದಲ್ಲಿ ಬಿಜೆಪಿಯೇ ಗೆಲ್ಲುತ್ತಾ ಬಂದಿದೆ. ಈ ಬಾರಿ ಅತಿರಥ- ಮಹಾರಥರನ್ನು ಮನೆಗೆ ಕಳಿಸುತ್ತೇವೆ. 28 ಕ್ಕೆ 28 ಸ್ಥಾನಗಳನ್ನು ಕೂಡ ಬಿಜೆಪಿಯೇ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.

Advertisement

ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ-ಕುಟುಂಬದ ಬಗ್ಗೆ ಚರ್ಚೆ ನಡೆಯದೆ, ಈಗ ದೇಶದ ಬಗ್ಗೆ ಚರ್ಚೆ ನಡೆಯುತ್ತಿದೆ. ಎಂಥಹ ನಾಯಕ ಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ದೇಶ ಗೆಲ್ಲಬೇಕು ಎಂದರೆ, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದರು. 

ಮಣ್ಣಿನ ಮಗ, ರೈತ ನಾಯಕ ಎಂಬ ಟ್ಯಾಗ್‌ಲೈನ್‌ ಇಟ್ಟುಕೊಂಡಿರುವ ದೇವೇಗೌಡರು, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಥವಾ ಯೋಧರು ವೀರ ಮರಣ ಹೊಂದಿದಾಗ ಅತ್ತಿರಲಿಲ್ಲ. ಜನರು ಸಂಕಷ್ಟದಲ್ಲಿದ್ದಾಗ ಕಣ್ಣೀರು ಬಾರದೆ, ಈಗ ತಮ್ಮ ಮೊಮ್ಮಕ್ಕಳು ಚುನಾವಣೆಗೆ ನಿಂತಾಗ ಕಣ್ಣೀರು ಬಂದಿದೆ. ಇದೊಂದು, ಅಪಹಾಸ್ಯಕ್ಕೆ ಒಳಗಾದ ಹೈಡ್ರಾಮಾ ಎಂದು ಲೇವಡಿ ಮಾಡಿದರು. ಆ ರೀತಿ ನಟನೆ, ಮೊಮ್ಮಕ್ಕಳ ಭವಿಷ್ಯಕೋ ಅಥವಾ ಜನರ ಬಗ್ಗೆ ಚಿಂತನೆಗೆ ಕಣ್ಣೀರೋ ಎಂಬುದನ್ನು ದೇವೇಗೌಡರು ಸ್ಪಷ್ಟಪಡಿಸಲಿ ಎಂದರು.

ರಾಜ್ಯದಲ್ಲಿ ಬಿಜೆಪಿಗೆ 22ಕ್ಕೂ ಹೆಚ್ಚು ಸ್ಥಾನ
 ಶಿವಮೊಗ್ಗ: ದೇಶದಲ್ಲಿ ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು ಎಂಬ ವಾತಾವರಣವಿದೆ. ದೇಶದ ಅಭಿವೃದ್ಧಿ-ರಕ್ಷಣೆಗಾಗಿ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ಬರಲಿದೆ. ದಕ್ಷಿಣ ಭಾರತದಿಂದ ಹೆಚ್ಚು ಬಿಜೆಪಿ ಸಂಸದರು ಸಂಸತ್‌ ಪ್ರವೇಶಿಸಲಿದ್ದಾರೆ. ರಾಜ್ಯದಲ್ಲಿ 22ಕ್ಕೂ ಹೆಚ್ಚಿನ ಸ್ಥಾನವನ್ನು ಪಕ್ಷ ಗೆಲ್ಲಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. 

ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ವರ್ಷಗಳ ಕಾಲ ಕುಟುಂಬ ರಾಜಕಾರಣ ನಡೆಯಲ್ಲ. ಇಷ್ಟು ವರ್ಷಗಳ ಕಾಲ ದೇವೇಗೌಡರಿಗಾಗಿ ಆ ಭಾಗದ ಜನ ಕೆಲಸ ಮಾಡಿದ್ದಾರೆ.  ಇದೀಗ ರೇವಣ್ಣರ ಮಗ ಪ್ರಜ್ವಲ್‌ ರೇವಣ್ಣ ಕಣಕ್ಕಿಳಿದಿದ್ದಾರೆ. ಮುಂದಿನ ಮೂರು ದಶಕ ಮತ್ತೆ ಗೌಡರ ಕುಟುಂಬಕ್ಕಾಗಿ ಕಾರ್ಯಕರ್ತರು ಕೆಲಸ ಮಾಡಬೇಕಿದೆ ಎಂದರು. 

Advertisement

ಪುಲ್ವಾಮಾ ದಾಳಿಯಲ್ಲಿ ಮೃತಪಟ್ಟ ಯೋಧರಿಗಾಗಿ ದೇಶದ ಜನ ಕಣೀರು ಹಾಕುತ್ತಿದ್ದಾರೆ. ಆದರೆ ಕಳೆದ 2-3 ದಶಕದಿಂದ  ದೇವೇಗೌಡರಕುಟುಂಬದ ವರ ಕಣ್ಣೀರು ನೋಡುತ್ತಿರುವ ರಾಜ್ಯದ ಜನರು ಈಗ ಮರುಳಾಗಲ್ಲ. ಅವರ ಕಣ್ಣೀರಿಗೆ ಯಾವ ಬೆಲೆ, ಅರ್ಥ ಹಾಗೂ ಮಹತ್ವ ಇಲ್ಲವೆಂದು ಟೀಕಿಸಿದರು. ಕೋರ್‌ ಕಮಿಟಿ ಸಭೆ ಈ ತಿಂಗಳ 18 ಮತ್ತು 19ಕ್ಕೆ ನಡೆಯಲಿದೆ. ಅಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್‌ ಆಗಲಿದೆ. ಚಿಕ್ಕಮಗಳೂರು-ಉಡುಪಿ ಕ್ಷೇತ್ರ ಬಿಜೆಪಿ ಭದ್ರಕೋಟೆ. ಆಕಾಂಕ್ಷಿಗಳು ಬಹಳ ಜನ ಇದ್ದಾರೆ. ನಮ್ಮ ಹೈಕಮಾಂಡ್‌ ತೀರ್ಮಾನವೇ ಅಂತಿಮ. ದೇಶದ ಹಾಗೂ ರಾಜ್ಯದ ಜನ ಬಿಜೆಪಿ ಜೊತೆಗಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ.
 ಸಿ.ಟಿ. ರವಿ, ಬಿಜೆಪಿ ಮುಖಂಡ

Advertisement

Udayavani is now on Telegram. Click here to join our channel and stay updated with the latest news.

Next