Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಂದೂಗಳ ಮಂಗಳಸೂತ್ರ ವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವಂಥ ಮಾತುಗಳು. ದೇಶದ ಪ್ರಧಾನಿಯಾಗಿ ಎಲ್ಲ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂಥ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ. ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗ ಬೇಕಾದರೆ ಎಲ್ಲರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲ ಎಂದರು.
ಕಾಂಗ್ರೆಸ್ ಜಾಹೀರಾತಿಗೆ ಪ್ರತಿಯಾಗಿ ಬಿಜೆಪಿಯವರು ಕಾಂಗ್ರೆಸ್ ಡೇಂಜರ್ ಎಂಬ ಜಾಹೀರಾತು ಬಿಡುಗಡೆ ಮಾಡಿದ್ದಾರೆ. ದೇಶಕ್ಕೆ ಬಿಜೆಪಿಯೇ ಡೇಂಜರ್ ಹೊರತು, ಕಾಂಗ್ರೆಸ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪ್ರಧಾನಿ ಮೋದಿ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ. ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತೋರಿದ್ದಾರೆ ಎಂದು ಜಾಹೀರಾತು ಬಿಡುಗಡೆ ಮಾಡಲಾಗಿದೆ. ಹೆಣ್ಣುಮಕ್ಕಳಿಗೆ ಉಚಿತ ಬಸ್ ಸೌಲಭ್ಯ, ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಗಳು ಡೇಂಜರ್ ಆಗುತ್ತವೆಯೇ? ಸಮಾಜ ಒಡೆಯುವಂತಹ ಕಾರ್ಯಗಳು, ಮತಗಳ ಧ್ರುವೀಕರಣ ಮಾಡು ವುದು ಅಪಾಯಕಾರಿಯೇ ಹೊರತು ವಿವಿಧತೆಯಲ್ಲಿ ಏಕತೆ ತರುವುದು ಡೇಂಜರ್ ಅಲ್ಲ ಎಂದರು.