ಬೆಂಗಳೂರು : ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಇಂದು (ಮಂಗಳವಾರ, ಏಪ್ರಿಲ್ 20) ರಾತ್ರಿ 8:45ಕ್ಕೆ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಕೋವಿಡ್ ಸೋಂಕು ದೇಶವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳು ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಮೋದಿ ಮಾತನಾಡಲಿದ್ದಾರೆ.
ದೇಶದಲ್ಲಿ ಪ್ರತಿ ದಿನ 2 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪತ್ತೆಯಾಗುತ್ತಿವೆ. ನಿನ್ನೆ ಒಂದೇ ದಿನಕ್ಕೆ 1700ಕ್ಕು ಅಧಿಕ ಮಂದಿ ಕೋವಿಡ್ ಸೋಂಕಿನಿಂದ ಮೃತ ಪಟ್ಟಿದ್ದಾರೆ. ಇನ್ನು ಕೋವಿಡ್ ಕಾರಣ ಹಲವು ರಾಜ್ಯಗಳು ಈಗಾಗಲೇ ಕಠಿಣ ನಿರ್ಧಾರಗಳನ್ನು ಕೈಗೊಂಡಿದ್ದು, ಕೆಲವು ರಾಜ್ಯಗಳು ನೈಟ್ ಕರ್ಫ್ಯೂ, ಇನ್ನು ಕೆಲವು ರಾಜ್ಯಗಳು ಲಾಕ್ ಡೌನ್ ಘೋಷಣೆ ಮಾಡಿವೆ. ಈ ಹಿನ್ನೆಲೆಯಲ್ಲಿಯೇ ಮೋದಿ ಮಾಡುತ್ತಿರುವ ಇಂದಿನ ಭಾಷಣದಲ್ಲಿ ಏನಿರಲಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.