Advertisement

‘ಮೋದಿ’ಉಪನಾಮ ಮಾನನಷ್ಟ ಮೊಕದ್ದಮೆ ; ರಾಹುಲ್ ಗಾಂಧಿ ದೋಷಿ ಎಂದು ತೀರ್ಪು

11:36 AM Mar 23, 2023 | Team Udayavani |

ಸೂರತ್: ನಗರದ ನ್ಯಾಯಾಲಯವು ಗುರುವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರ “ಮೋದಿ ಉಪನಾಮ” ಹೇಳಿಕೆಗಾಗಿ ದೋಷಿ ಎಂದು ತೀರ್ಪು ನೀಡಿದೆ.

Advertisement

ಐಪಿಸಿ ಸೆಕ್ಷನ್ 504 ರ ಅಡಿಯಲ್ಲಿ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಲಾಗಿದ್ದು ಈ ಸೆಕ್ಷನ್ ಅಡಿಯಲ್ಲಿ ಗರಿಷ್ಠ ಎರಡು ವರ್ಷಗಳ ಸಂಭವನೀಯ ಶಿಕ್ಷೆ ನೀಡಲಾಗುತ್ತದೆ.

“ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ?” ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಕ್ಷಾಲಾಗಿತ್ತು.

2019 ರ ಲೋಕಸಭೆ ಚುನಾವಣೆಗೆ ಮುನ್ನ ಕೋಲಾರದಲ್ಲಿ ನಡೆದ ರ‍್ಯಾಲಿಯಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡಲಾಗಿದ್ದು, ಇದು ಇಡೀ ಮೋದಿ ಸಮುದಾಯವನ್ನು ದೂಷಿಸಿದೆ ಎಂದು ದೂರುದಾರರು ಹೇಳಿದ್ದರು.

ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಗುರುವಾರ ಪೋಸ್ಟರ್‌ಗಳನ್ನು ಹಾಕಿತ್ತು. ಕಾಂಗ್ರೆಸ್ ಸಂಸದರು ಕೋರ್ಟ್ ಕಲಾಪಕ್ಕೆ ಆಗಮಿಸಿದ ಸೂರತ್ ಕೋರ್ಟ್‌ನ ಹೊರಗೆ ಪೋಸ್ಟರ್‌ಗಳನ್ನು ಹಾಕಲಾಗಿತ್ತು. ಭಗತ್ ಸಿಂಗ್ ಮತ್ತು ಸುಖದೇವ್ ಅವರ ಚಿತ್ರಗಳ ಜೊತೆಗೆ “ಪ್ರಜಾಪ್ರಭುತ್ವವನ್ನು ಬೆಂಬಲಿಸಲು ಸೂರತ್‌ಗೆ ಹೋಗೋಣ” ಎಂದು ಪೋಸ್ಟರ್‌ಗಳಲ್ಲಿ ಬರೆಯಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next