Advertisement

ರಾಜ್ಯದಲ್ಲಿ ಇಂಧನ ಸಪ್ತಾಹವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ : ಸಿಎಂ ಬೊಮ್ಮಾಯಿ

07:43 PM Dec 18, 2022 | Team Udayavani |

ಹಾವೇರಿ: ಮುಂದಿನ ವರ್ಷ ಫೆಬ್ರವರಿಯಲ್ಲಿ ಕರ್ನಾಟಕದಲ್ಲಿ 2023 ರ ಭಾರತ ಇಂಧನ ಸಪ್ತಾಹವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

Advertisement

ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ಖಾಸಗಿ ಕಂಪನಿಯ 3 ಸಾವಿರ ಕೆಎಲ್‌ಪಿಡಿ ಎಥೆನಾಲ್ ಮತ್ತು ಸಕ್ಕರೆ ಕಾರ್ಖಾನೆ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ದೇಶ ಮತ್ತು ವಿದೇಶಗಳಿಂದ ಸುಮಾರು 10,000 ಪ್ರತಿನಿಧಿಗಳು ಇಂಧನ ಉತ್ಪಾದನೆ ಮತ್ತು ನೀತಿಗಳ ಬಗ್ಗೆ ಚರ್ಚಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಹೊಂದಿರುವ ಬೆಂಗಳೂರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದರು.

ಎಥೆನಾಲ್ ಕಾರ್ಖಾನೆಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಅವುಗಳನ್ನು ಸ್ಥಾಪಿಸಲು ಸರ್ಕಾರವು ಶೇಕಡಾ 6 ಬಡ್ಡಿದರದಲ್ಲಿ ಸಹಾಯಧನ ಮತ್ತು 95 ರಷ್ಟು ಆರ್ಥಿಕ ಸಹಾಯವನ್ನು ನೀಡುತ್ತಿದೆ ಎಂದರು.

ಹಾವೇರಿ ಜಿಲ್ಲೆಯ ಸಂಕೂರು ಮತ್ತು ಹಿರೇಕೆರೂರಿನಲ್ಲಿ ಎರಡು ಎಥೆನಾಲ್ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಕೆಲವು ಕಾರ್ಖಾನೆಗಳು ಬರಲಿವೆ. ರೈತರ ಶ್ರೇಯೋಭಿವೃದ್ಧಿಗೆ, ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಿ, ಸರಕಾರಕ್ಕೆ ಆದಾಯ ಬರುವಂತೆ ಕಾರ್ಖಾನೆ ಆರಂಭಿಸಲು ಸರಕಾರ ಅನುಮತಿ ನೀಡಲಿದೆ. ಮುಂದಿನ 50 ವರ್ಷಗಳಲ್ಲಿ ಜೈವಿಕ ಇಂಧನಕ್ಕೆ ಹೆಚ್ಚಿನ ಬೇಡಿಕೆ ಬರಲಿದೆ. ಆರ್ಥಿಕತೆ, ಪರಿಸರ ಮತ್ತು ಶಕ್ತಿ ಪರಸ್ಪರ ಹೆಣೆದುಕೊಂಡಿದೆ ಮತ್ತು ಈ ಮೂರು ಅಂಶಗಳ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ಆರ್ಥಿಕ ಸಮೃದ್ಧಿಯನ್ನು ಕಾಣಬಹುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next