Advertisement

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

01:21 AM Apr 21, 2024 | Team Udayavani |

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಅಧಿಕಾರವಧಿಯಲ್ಲಿ ಮಾಡಿರುವ ಭ್ರಷ್ಟಾಚಾರವನ್ನು ಸಮರ್ಥಿಸಿಕೊಳ್ಳಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿನ ಮೇಲೆ ಇದು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಂ.ಸಿ.ಸುಧಾಕರ್‌ ಲೇವಡಿ ಮಾಡಿದರು.

Advertisement

ನಗರ ಹೊರವಲಯದ ಖಾಸಗಿ ಹೊಟೇಲ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಆರ್ಥಿಕ ತಜ್ಞರೊಂದಿಗೆ ಚರ್ಚಿಸಿಯೇ ಜಾರಿಗೆ ತರಲಾಗಿದೆ. ಆದರೆ ಈಗ ಪ್ರಧಾನಿ ನರೇಂದ್ರ ಮೋದಿ ಅವರು ಘೋಷ‌ಣೆ ಮಾಡಿರುವ ಗ್ಯಾರಂಟಿಗಳು ನಕಲಿಯಾಗಿದ್ದು, ಅವು ಅನುಷ್ಠಾನಕ್ಕೆ ಬರುವುದಿಲ್ಲ. ದೇಶದಲ್ಲಿ 2014ರಲ್ಲಿ 54 ಲಕ್ಷ ಕೋಟಿ ಸಾಲ ಇತ್ತು. ಈಗ 180 ಲಕ್ಷ ಕೋಟಿ ರೂ. ದಾಟಿದೆ. ಇದರ ಪರಿಣಾಮ ಜನತೆಯ ಮೇಲೆ ಬೀರಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next