Advertisement

ಇಂದಿನಿಂದ ಎರಡು ದಿನ ರಾಜ್ಯದಲ್ಲಿ ಮೋದಿ ಪ್ರವಾಸ

09:56 AM Jan 03, 2020 | mahesh |

ಬೆಂಗಳೂರು: ತುಮಕೂರಿನಲ್ಲಿ ನಡೆಯಲಿರುವ ಕೃಷಿ ಸಮಾವೇಶ ಮತ್ತು ಬೆಂಗಳೂರಿನಲ್ಲಿನ ಭಾರತೀಯ ವಿಜ್ಞಾನ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು, ಗುರುವಾರ ಮತ್ತು ಶುಕ್ರವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ.

Advertisement

ಉಪಚುನಾವಣೆಯ ಫ‌ಲಿತಾಂಶದಿಂದ ಬಿಜೆಪಿ ಸರಕಾರ ರಾಜ್ಯದಲ್ಲಿ ಭದ್ರವಾಗಿ ನೆಲೆಯೂರಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಜತೆಗೆ ವಿಜ್ಞಾನ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ತುಮಕೂರು ನಗರದಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ.

ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಯಲಹಂಕ ವಾಯುನೆಲೆಗೆ ಬರಲಿರುವ ಮೋದಿ ಅವರು ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ನೇರವಾಗಿ ತುಮಕೂರಿಗೆ ತೆರಳಲಿದ್ದಾರೆ. ಅಪರಾಹ್ನ 2.30ರ ಸುಮಾರಿಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ತುಮಕೂರಿನ ಸರಕಾರಿ ಜೂನಿಯರ್‌ ಕಾಲೇಜಿನಲ್ಲಿ ನಡೆಯಲಿರುವ ರೈತ ಸಮಾವೇಶದಲ್ಲಿ ಭಾಗವಹಿಸಿ, ಸರಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next