Advertisement

ಮೋದಿ ದೇಶದ್ರೋಹಿ: ಸಿದ್ದರಾಮಯ್ಯ

12:21 AM May 13, 2019 | Team Udayavani |

ಬೆಂಗಳೂರು: ಜಾತಿ, ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ನಿಜವಾದ ದೇಶದ್ರೋಹಿ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮೂಲಕ ವಾಗ್ಧಾಳಿ ನಡೆಸಿದ್ದಾರೆ.

Advertisement

ಮಹಾತ್ಮಾಗಾಂಧಿ, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಒಬ್ಬನೇ ಒಬ್ಬ ಬಿಜೆಪಿಯವರನ್ನು ತೋರಿಸಿ. ಉಳಿದವರ ದೇಶಪ್ರೇಮವನ್ನು ಪ್ರಶ್ನಿಸುವ ಬಿಜೆಪಿಯವರೇ ನಿಜವಾದ ದೇಶಪ್ರೇಮಿಗಳಲ್ಲ.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲು ಸೇರಿದ ಪಕ್ಷದವರಿಗೆ ಭ್ರಷ್ಟಾಚಾರ ಮಾಡಿ ಜೈಲು ಸೇರಿದ ಪಕ್ಷದವರು ದೇಶ ಪ್ರೇಮದ ಸರ್ಟಿಫಿಕೇಟ್‌ ನೀಡುತ್ತಿದ್ದಾರೆ. ಎಂತಹ ವಿಪರ್ಯಾಸವಲ್ಲವೇ? ದೇಶ ಪ್ರೇಮಿ ಗಾಂಧಿಯನ್ನು ಕೊಂದ ಆರ್‌ಎಸ್‌ಎಸ್‌ನ ಗೋಡ್ಸೆ ಅನುಯಾಯಿಗಳು ನೀಡುವ ದೇಶ ಪ್ರೇಮದ ಸರ್ಟಿಫಿಕೇಟ್‌ ಯಾರಿಗೆ ಬೇಕಾಗಿದೆ ? ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಮಹಾತ್ಮಾ ಗಾಂಧಿ, ಜವಾಹರಲಾಲ್‌ ನೆಹರೂ, ಸರ್ದಾರ್‌ ವಲ್ಲಭಭಾಯಿ ಪಟೇಲ್‌, ಮೌಲಾನಾ ಆಝಾದ್‌ ಇವರೆಲ್ಲ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ವರ್ಷಗಟ್ಟಲೇ ಜೈಲುವಾಸ ಅನುಭವಿಸಿದರು. ಇವರಂತೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಜೈಲು ಸೇರಿ ಬಂದ ಒಬ್ಬನೇ ಒಬ್ಬ ಆರ್‌ಎಸ್‌ಎಸ್‌ ಮುಖಂಡನನ್ನು ತೋರಿಸಿ, ಆ ಮೇಲೆ ಬಿಜೆಪಿಯವರ ದೇಶ ಪ್ರೇಮವನ್ನು ಒಪ್ಪೋಣ ಎಂದಿದ್ದಾರೆ.

Advertisement

ಇದೇ ವೇಳೆ, ಮೋದಿ ಸರ್ಕಾರದ ವಿರುದ್ಧವೂ ವಾಗ್ಧಾಳಿ ನಡೆಸಿರುವ ಸಿದ್ದರಾಮಯ್ಯ, ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದು ಬಡ ಜನರಿಗೆ ಕಡಿಮೆ ದರದಲ್ಲಿ ಆಹಾರ ಸಿಗುವಂತೆ ಮಾಡಿದರು.

ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೊಳಿಸಿ ಸಾಮಾಜಿಕ ಬದಲಾವಣೆಗೆ ಕಾರಣರಾದವರು ಕಾಂಗ್ರೆಸ್‌ನವರು. ಆದರೆ, ನೋಟ್‌ ಬ್ಯಾನ್‌ ಮಾಡಿ ಜನರನ್ನು ಬೀದಿಗೆ ತಂದವರು ಮೋದಿಯವರು. ಜನರ ದುಡ್ಡಿನಲ್ಲಿ ಪ್ರಧಾನಿ ಮೋದಿ ವಿದೇಶ ಯಾತ್ರೆ ಮಾಡಿಕೊಂಡು ಅರಾಮವಾಗಿದ್ದಾರೆ.

ಈವರೆಗೆ 1690 ಕೋಟಿ ರೂ.ವೆಚ್ಚದಲ್ಲಿ 84 ಬಾರಿ ವಿದೇಶ ಯಾತ್ರೆ ಮಾಡಿದ್ದು ಸುಳ್ಳು ಭಾಷಣ, ವಿದೇಶ ಸುತ್ತಿದ್ದೇ ಅವರ ಸಾಧನೆಗಳಾಗಿವೆ. ಅಭಿವೃದ್ಧಿ ಮತ್ತು ಸೌಹಾರ್ದತೆಯ ಅರ್ಥವೇ ಗೊತ್ತಿರದ ಬಿಜೆಪಿಯನ್ನು ಈ ಬಾರಿ ಜನ ತಿರಸ್ಕರಿಸಲಿದ್ದಾರೆ ಎಂಬ ಭರವಸೆಯಿದೆ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next