Advertisement

ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ : ಮೋದಿ ಟ್ವೀಟ್

02:28 PM Apr 19, 2021 | Team Udayavani |

ಬೆಂಗಳೂರು : ಕನ್ನಡದ ಖ್ಯಾತ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ (108) ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ನಿಧನರಾಗಿದ್ದಾರೆ. ಇವರ ಸಾವಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಅವರ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಸಾಧನೆಯನ್ನು ಹೊಗಳಿದ್ದಾರೆ.

Advertisement

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪ್ರೊ. ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ದೊಡ್ಡ ನಿರ್ವಾತ ಸೃಷ್ಟಿಸಿದೆ. ಖ್ಯಾತ ಬರಹಗಾರ ಮತ್ತು ಚಿಂತಕರಾಗಿರುವ ಅವರು ಕನ್ನಡವನ್ನು ಜನಪ್ರಿಯಗೊಳಿಸಲು ಅನೇಕ ಪ್ರಯತ್ನಗಳನ್ನು ಮಾಡಿದ್ದರು. ತಮ್ಮ ಕೆಲಸದ ಬಗ್ಗೆ ಸದಾ ಒಲವು ಹೊಂದಿದ್ದ ಅವರು ಅನೇಕ ಯುವಕರಿಗೆ ಸ್ಫೂರ್ತಿಯಾಗಿದ್ದರು. ಓಂ ಶಾಂತಿ’ಎಂದು ಬರೆಯುವ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಮೋದಿ ಸಂತಾಪ ಸೂಚಿಸಿದ್ದಾರೆ.

ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next