ಚಿತ್ರದುರ್ಗ: ಲಿಂಗಾಯತ ಪ್ರತ್ಯೇಕ ಧರ್ಮ ಘೋಷಣೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಾಗುವುದು.
ಪ್ರಧಾನಿಯವರಿಂದ ನ್ಯಾಯ ಸಿಗದಿದ್ದರೆ ದೆಹಲಿಯಲ್ಲಿ ಬೃಹತ್ ರ್ಯಾಲಿ ನಡೆಸಿ, ಅಂತಿಮ ವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಲಾಗುವುದು ಎಂದು ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಡಾ| ಮಾತೆ ಮಹಾದೇವಿ ಎಚ್ಚರಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಈಗಲೂ ಹೋರಾಟ ಮುಂದುವರಿಸಲಾಗುವುದು. ಈ ಬಗ್ಗೆ ಹಿಂದಿನ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ. ನ್ಯಾಯಬದಟಛಿವಾದ ಬೇಡಿಕೆಯನ್ನು ಸಂವಿಧಾನಾತ್ಮಕವಾಗಿ ಪ್ರಧಾನಿಯವರು ಈಡೇರಿಸಬೇಕು ಎಂದರು.
ಶಾಮನೂರು ಶಿವಶಂಕರಪ್ಪನವರಿಗೆ ವಯಸ್ಸಾಗಿರುವುದರಿಂದ ಇನ್ನೊಂದು ಉಪಮುಖ್ಯಮಂತ್ರಿ ಸ್ಥಾನವನ್ನು ಬೇರೆ
ಯಾರಿಗಾದರೂ ಕೊಡಲಿ.ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಆ ಅರ್ಹತೆ ಇದೆ.
– ಡಾ| ಮಾತೆ ಮಹಾದೇವಿ,
ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ