Advertisement

Modi ಈ ಬಾರಿಯ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತಾಡಲ್ಲ!

12:48 AM Sep 09, 2024 | Team Udayavani |

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುವುದಿಲ್ಲ. ಅವರ ಬದಲಾಗಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಸೆ.28ರಂದು ಮಾತನಾಡಲಿದ್ದಾರೆ. ಆದರೆ ಮೋದಿಯವರು ನಿಗದಿಯಂತೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, 22ರಂದು ನ್ಯೂಯಾರ್ಕ್‌ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ವಿಶ್ವಸಂಸ್ಥೆಯಲ್ಲಿ ಸೆ.22, ಸೆ.23ರಂದು ಕಾರ್ಯ ಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿಯವರು ಅಮೆರಿಕಕ್ಕೆ ತೆರಳಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next