Advertisement

ಮಹಾಬಲಿಪುರಂ ಬೀಚ್ ನಲ್ಲಿ ಪ್ರಧಾನಿ ಮೋದಿಯಿಂದ ಸ್ವಚ್ಛ ಭಾರತ ಅಭಿಯಾನ: ವಿಡಿಯೋ ವೈರಲ್

09:56 AM Oct 13, 2019 | Mithun PG |

ಮಹಾಬಲಿಪುರಂ : ಭಾರತ ಮತ್ತು ಚೀನಾ ದೇಶದ ಮಹಾ ನಾಯಕರಾದ ಪ್ರಧಾನಿ ಮೋದಿ ಮತ್ತು ಕ್ಸಿ ಜಿನ್ ಪಿಂಗ್ ಅವರ ಸ್ನೇಹ ಸಮ್ಮೀಲನಕ್ಕೆ ನಿನ್ನೆ ತಮಿಳುನಾಡಿನ ಮಹಾಬಲಿಪುರಂ ಸಾಕ್ಷಿಯಾದ ಬೆನ್ನಲ್ಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳ್ಳಂ ಬೆಳಗ್ಗೆ ಬೀಚ್‌ನಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ  ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

Advertisement

ಸ್ವತಃ ಸ್ವಚ್ಚ ಭಾರತ ಅಭಿಯಾನವನ್ನು ಕೈಗೊಂಡ ವಿಡಿಯೋವನ್ನು ಟ್ವೀಟ್ ಮಾಡಿರುವ ಪಿಎಂ ಮೋದಿ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಚ ಮತ್ತು  ಅಚ್ಚುಕಟ್ಟಾಗಿರಿಸುವಂತೆ ಸೂಚನೆ ನೀಡಿದ್ದಾರೆ . ಅದರ ಜೊತೆಗೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕೆಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next