ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶನಿವಾರ ಗೋವಾದಲ್ಲಿ ಹೇಳಿಕೆ ನೀಡಿದ್ದಾರೆ.
Advertisement
ಪಕ್ಷದ ಕಾರ್ಯಕರತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳು ಒಂದಾಗುವ ಅಗತ್ಯವನ್ನು ಗುರುತಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ . ಬಿಜೆಪಿಯನ್ನು ಎದುರಿಸಲು ಮತ್ತು ಭಾರತದ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಲು ಪ್ರಾದೇಶಿಕ ಪಕ್ಷಗಳ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು.
Related Articles
Advertisement
ಭೇಟಿಯ ನಂತರ ಮಮತಾ ಬ್ಯಾನರ್ಜಿ ಮಾತನಾಡಿ, ”ಎರಡು ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಮತ್ತು ಬಿಜೆಪಿ ವಿರುದ್ಧ ಹೋರಾಡಲು ನಿರ್ಧರಿಸಿವೆ” ಎಂದರು.
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಯ ಹಿಂದಿನ ಮಿತ್ರ ಪಕ್ಷವಾದ ಗೋವಾ ಫಾರ್ವರ್ಡ್ ಪಕ್ಷ ಪಕ್ಷವು ಟಿಎಂಸಿ ಜೊತೆ ಮೈತ್ರಿ ಮಾಡಿಕೊಂಡು ಸೀಟು ಹಂಚಿಕೆ ಮೂಲಕ ಚುನಾವಣೆ ಎದುರಿಸಲು ಮುಂದಾಗಿದೆ.