Advertisement
ಇದು ಅವರ ಗೆಲುವಿಗೆ ಕೆಲಸ ಮಾಡಿದೆ. ಗುಜರಾತ್‌ನಲ್ಲಿ ಮೋದಿ ಅವರ ಪ್ರಭಾವ ಕುಗ್ಗಿದೆ. ಅಲ್ಲಿನ ಜನ ಈಗಲೂ ನೋಟ್ ಅಮಾನ್ಯಿàಕರಣ ಹಾಗೂ ಜಿಎಸ್‌ಟಿಯನ್ನು ಒಪ್ಪಿಕೊಂಡಿಲ್ಲ. ಅಲ್ಲಿ ಮೋದಿ ಪ್ರಭಾವವಿದ್ದರೆ, ಕಾಂಗ್ರೆಸ್ ಸಂಪೂರ್ಣವಾಗಿ ಸೋಲಬೇಕಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬನಹಟ್ಟಿ: ಕಳೆದ ಬಾರಿ ಚುನಾವಣೆಗೆ ಹೋಲಿಸಿದರೆ ಜರಾತ್‌ನಲ್ಲಿ ಕಾಂಗ್ರೆಸ್ ಹೆಚ್ಚಿನ ಗೆಲುವು ಸಾಧಿಸಿದೆ ಎಂದು ಸಚಿವೆ ಉಮಾಶ್ರೀ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಕಹಿ ಬದಲಾಗಿ ಸಂತಸ ನೀಡಿದೆ. ಪಕ್ಷದ ನೂತನ ಅಧಿಪತಿಯಾಗಿರುವ ರಾಹುಲ್ ಗಾಂಧಿ ನೇತೃತ್ವದ ಹೋರಾಟದಿಂದಲೇ ಅಷ್ಟೊಂದು ಪ್ರಮಾಣದ ಕ್ಷೇತ್ರಗಳಲ್ಲಿ
ಕಾಂಗ್ರೆಸ್ ಗೆಲುವಿಗೆ ಕಾರಣವಾಗಿದೆ. ಎಂದರು.
Related Articles
Advertisement
ಬಾಗಲಕೋಟೆ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಇವಿಎಂ ಯಂತ್ರ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‌ನಲ್ಲಿ ಜನ ಮತ ಹಾಕಿದ್ದಾರೋ ಅಥವಾ ಇವಿಎಂ ಯಂತ್ರ ಮತ ಹಾಕಿದೆಯೋ ಎಂಬ ಅನುಮಾನ ಮೂಡಿದೆ. ಇವಿಎಂ ದುರುಪಯೋಗ ಸಾಧ್ಯತೆಯಿದೆ ಎಂಬ ಅನುಮಾನ ಎಲ್ಲೆಡೆ ಇದ್ದರೂ ಕೂಡ ಇವಿಎಂ ಯಂತ್ರವನ್ನೇ ಚುನಾವಣೆಯಲ್ಲಿ ಬಳಕೆ ಮಾಡಲಾಗಿದೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ದೊಡ್ಡ ದೊಡ್ಡ ಉದ್ದಿಮೆದಾರರು ಅವರ ಪರವಾಗಿದ್ದಾರೆ. ಹೀಗಾಗಿ ಗುಜರಾತ್ ಗೆಲುವು ಸಾಧ್ಯವಾಗಿದೆ ಎಂದು ಹೇಳಿದರು.
ಕೀಳುಮಟ್ಟಕ್ಕಿಳಿದುಗೆದ್ದ ಪ್ರಧಾನಿ: ಎಚ್ಕೆ ಗದಗ: ಗುಜರಾತ್ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪ್ರಧಾನಿ ನರೇಂದ್ರ ಮೋದಿ ಕೀಳುಮಟ್ಟಕ್ಕೆ ಇಳಿದು, ಕೊನೆಗೂ ಜಯ ಸಾಧಿಸಿದ್ದಾರೆ. ಜನಾದೇಶಕ್ಕೆ ತಲೆ ಬಾಗುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್
ಸೋತಿರಬಹುದು. ಆದರೆ ಪಕ್ಷದ ಬಲವನ್ನು ಸಾಬೀತುಪಡಿಸಿದೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೆಲುವಿಗಾಗಿ ಜನರನ್ನು ಭಾವನಾತ್ಮಕವಾಗಿ ಹಿಡಿದುಕೊಂಡರು. ನೀಚ ಪದ ಪ್ರಯೋಗ ಹಾಗೂ ಪಾಕಿಸ್ತಾನದೊಂದಿಗೆ ಮಾತನಾಡಿದರು ಎನ್ನುವ ಕೀಳುಮಟ್ಟದ ಪ್ರಚಾರ ಮಾಡುವ ಮೂಲಕ ಜನರನ್ನು ಪ್ರಚೋದಿಸಿದರು ಎಂದು ಆರೋಪಿಸಿದರು. ಈ ಚುನಾವಣೆ ಮೂಲಕ ಯಾರೇ ಸೊಕ್ಕು ತೋರಿಸಿದರೂ ಅವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎನ್ನುವ ಎಚ್ಚರಿಕೆಯನ್ನು ಜನ ನೀಡಿದ್ದಾರೆ. ಬಿಜೆಪಿ ಎಷ್ಟೇ ಪ್ರಚೋದಿಸಿದರೂ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಕಳೆದ ಚುನಾವಣೆಯ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾದ ಬಳಿಕ ಮೋದಿ ನಾಡಲ್ಲಿ ಕಾಂಗ್ರೆಸ್ ಶೇಕಡಾವಾರು ಮತ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ ಎಂದರು.