Advertisement
ಸುದ್ದಿಗಾರರ ಜೊತೆ ಮಾತನಾಡಿ, ಇಷ್ಟು ದಿನ ಚೌಕಿದಾರ್ ಚೋರ್ ಹೈ ಎಂದು ಅಬ್ಬರಿಸುತ್ತಿದ್ದ ಶಿವಸೇನೆ ಮುಖಂಡ ಠಾಕ್ರೆ ಇತರರು ಈಗ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದನ್ನು ನೋಡಿದರೆ ಚೋರ್ ಪಕ್ಕದಲ್ಲಿ ಕುಳಿತುಕೊಳ್ಳಲು ಹೊರಟಿದ್ದಾರೆ. ಶಿವಸೇನೆ-ಬಿಜೆಪಿ ಮೈತ್ರಿ ಕುರಿತು ಕಾಂಗ್ರೆಸ್‌ಗೆ ಮೊದಲೇ ಗೊತ್ತಿತ್ತು. ದೂರವಿದ್ದಂತೆ ಮಾಡಿ ಹೆಚ್ಚು ಸೀಟು ಪಡೆದುಕೊಳ್ಳಲು ಚೌಕಾಸಿ ನಡೆಸುವ ಉದ್ದೇಶ ಅವರದ್ದಾಗಿತ್ತು. ಈಗ ಅದು ಈಡೇರಿದಂತಾಗಿದೆ. ಈ ಮೈತ್ರಿ ಮಾಡಿಕೊಂಡಿರುವುದು ನೋಡಿದಾಗ ಕಳ್ಳನಿರಲಿ, ಸುಳ್ಳನಿರಲಿ ಒಟ್ಟಾರೆ ಅಧಿಕಾರ ಬೇಕು ಎನ್ನುವುದನ್ನು ಇದು ನಿರೂಪಿಸುತ್ತದೆ ಎಂದರು. ಕಾಂಗ್ರೆಸ್ ಪಕ್ಷದ ಗಮನಕ್ಕೆ ತಾರದೆ ಉತ್ತರ ಪ್ರದೇಶದಲ್ಲಿ ಬಿಎಸ್ಪಿ-ಎಸ್ಪಿ ಮೈತ್ರಿ ಮಾಡಿಕೊಂಡಿವೆ. ಈಗ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವುದು ಅನಿವಾರ್ಯ ಎಂದರು.
ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ