Advertisement

ಮೋದಿ ವಿಜಯ ಸಂಕಲ್ಪ ಯಾತ್ರೆಗೆ ವಿಧ್ಯುಕ್ತ ಚಾಲನೆ

09:13 AM Feb 23, 2019 | Team Udayavani |

ಹುಮನಾಬಾದ: ನಗರದ ರಾಮ್‌ ಮತ್ತು ರಾಜ್‌ ಸಂಯುಕ್ತ ಪ.ಪೂ ಕಾಲೇಜು ಸಮೀಪದ ವಿಶಾಲ ಪ್ರಾಂಗಣದಲ್ಲಿ ಶುಕ್ರವಾರ ಸಾವಿರಾರು ಸಂಖ್ಯೆ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಮಧ್ಯ ಬೀದರ-ಕಲಬುರಗಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮೋದಿ ವಿಜಯ ಸಂಕಲ್ಪ ಯಾತ್ರೆಗೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವಿಧ್ಯುಕ್ತ ಚಾಲನೆ ನೀಡಿದರು.

Advertisement

ವೀರಭದ್ರ-ಅಂಬೇಡ್ಕರ್‌ಗೆ ಪೂಜೆ: ಮಧ್ಯಾಹ್ನ ನಗರಕ್ಕೆ ಆಗಮಿಸಿದ ಕೇಂದ್ರ ಕೃಷಿ ಸಚಿವ ಪುರುಷೋತ್ತಮ ರೂಪಾಲಾ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮೊದಲು ನಗರದ ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಡಾ| ಅಂಬೇಡ್ಕರ್‌ ವೃತ್ತಕ್ಕೆ ಆಗಮಿಸಿದ ಗಣ್ಯರು ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿದರು. 

ಬೈಕ್‌ ರ್ಯಾಲಿ: ಅಲ್ಲಿಂದ ಮುಖ್ಯ ರಸ್ತೆ ಮಾರ್ಗವಾಗಿ ಬಹಿರಂಗ ಸಭೆ ನಡೆಯುವ ಬೃಹತ್‌ ಮಂಟಪದವರೆಗೆ ಮೋದಿ ವಿಜಯ ಸಂಕಲ್ಪ ಯಾತ್ರೆ ನಿಮಿತ್ತ ಸಿದ್ಧಪಡಿಸಿದ್ದ ರಥದಲ್ಲಿ ಹೊರಡುತ್ತಿದ್ದಂತೆ ಪಕ್ಷದ ನೂರಾರು ಕಾರ್ಯಕರ್ತರು ಬೈಕ್‌ ರ್ಯಾಲಿಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಪರಜಯ ಘೋಷ ಕೂಗುತ್ತ ಮಹಾಮಂಟಪಕ್ಕೆ ಬರಮಾಡಿಕೊಂಡರು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಳಿಕ ಜ್ಯೋತಿ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ನಂತರ ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ 5 ವರ್ಷಗಳಲ್ಲಿ ಕೈಗೊಂಡಿರುವ ಸಾಧನೆ ಕುರಿತ ಕಿರುಹೊತ್ತಿಗೆಯನ್ನು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಬಿಡುಗಡೆಗೊಳಿಸಿ, ಸಂಸದ ಖೂಬಾ ಸಾಧನೆ ಬಣ್ಣಿಸಿ, ಬೀದರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವಂತೆ ನೆರದ ಜನರಲ್ಲಿ ಮನವಿ ಮಾಡಿದರು.
 
ಕೇಂದ್ರ ಕೃಷಿ ಸಚಿವ ಪುರುಷೋತ್ತಮ ರೂಪಾಲಾ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಮಾಜಿ ಉಪಮುಖ್ಯಮಂತ್ರಿ ಆರ್‌. ಅಶೋಕ, ಮಾಜಿ ಸಚಿವ ಗೋವಿಂದ ಕಾರಜೋಳ, ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ ಮಾತನಾಡಿದರು.

ಸಂಸದ ಭಗವಂತ ಖೂಬಾ ಲೋಕಸಭಾ ಕ್ಷೇತ್ರಾದ್ಯಂತ ತಮ್ಮೆಲ್ಲರ ಅಶೀರ್ವಾದದಿಂದ ಜನತೆಯ ಕಳೆದ ಹಲವು ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಅನೇಕ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ, ಮತದಾರ ಪ್ರಭುಗಳು ಹಸನ್ಮುಖೀಯಾಗಿರಲು ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ ಎಂದು ತಿಳಿಸಿ, ಮೋದಿ ಅವರ ಕೈ ಬಲಪಡಿಸಲು ಜನತೆಯಲ್ಲಿ ಮನವಿ ಮಾಡಿದರು.

Advertisement

ಔರಾದ ಶಾಸಕ ಪ್ರಭು ಚವ್ಹಾಣ್‌, ರಾಜ್ಯ ಕಾರ್ಯದರ್ಶಿ ರವಿಕುಮಾರ, ರೌ´ೋದ್ದಿನ್‌ ಕಚೇರಿವಾಲಾ ಸೇರಿದಂತೆ ಪಕ್ಷದ ಅನೇಕ ಕಾರ್ಯಕರ್ತರು ಇದ್ದರು. ಆರ್‌.ಅಶೋಕ, ಬಿ.ಎಸ್‌. ಯಡಿಯೂರಪ್ಪ, ಜಗದೀಶ ಶೆಟ್ಟರ ಮಾತನಾಡುವಾಗ ಪ್ರೇಕ್ಷಕರ ಗ್ಯಾಲಿರಿಯಲ್ಲಿ ಕುಳಿತಿದ್ದ ಔರಾದ ಕ್ಷೇತ್ರದ ಕಾರ್ಯಕರ್ತರು ಆಗಾಗ ಶಾಸಕ ಪ್ರಭು ಚವ್ಹಾಣ ಕೀ ಜೈ ಎಂಬ ಘೋಷಣೆ ಕೂಗಿದರು. 

ಪಕ್ಷದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಶಿವರಾಜ ಗಂದಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮನಾಥ ಪಾಟೀಲ ನಿರೂಪಿಸಿದರು. ಜಿಲ್ಲಾ ಅಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ ಸ್ವಾಗತಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next