Advertisement

Modi ಜನಪ್ರಿಯತೆ ನೆಲಕಚ್ಚಿದೆ: ಸಿಎಂ ಸಿದ್ದರಾಮಯ್ಯ

12:48 AM Jun 05, 2024 | Team Udayavani |

ಬೆಂಗಳೂರು: ಬಿಜೆಪಿ ಸರಳ ಬಹುಮತದಲ್ಲೂ ಸೋತಿದೆ. ದೇಶದಲ್ಲಿ ಎಲ್ಲೂ ಮೋದಿಯವರ ಅಲೆ ಕಾಣಲಿಲ್ಲ. ಹೀಗಾಗಿ ಮೋದಿ ಜನಪ್ರಿಯತೆ ನೆಲಕ ಚ್ಚಿದೆ ಎನ್ನುವುದಕ್ಕೆ ಈ ಫ‌ಲಿತಾಂಶ ಸಾಕ್ಷಿಯಾಗಿದೆ. ಅವರಿಗೆ ಮತ್ತೆ ಪ್ರಧಾನಿಯಾಗುವ ಹಕ್ಕಿಲ್ಲ. ಯಾರು ಸರ್ಕಾರ ರಚಿಸುತ್ತಾರೆಂದು ಹೇಳಲಾಗದು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

Advertisement

ಫ‌ಲಿತಾಂಶದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15-20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9ಕ್ಕೆ ಏರಿದ್ದೇವೆ ಎಂದರು.

ಈ ಬಾರಿ ನಮಗೆ ಶೇ. 45.34, ಬಿಜೆಪಿ ಶೇ. 46.04 ಮತ ಪಡಿದಿದೆ. 2019 ರಲ್ಲಿ ಬಿಜೆಪಿ ಶೇ. 51.38 ಮತ ಗಳಿಸಿತ್ತು. ನಮಗೆ ಶೇ. 31.88 ಮಾತ್ರ ಮತಗಳು ಬಂದಿದ್ದವು. 2019ಕ್ಕೆ ಹೋಲಿಸಿದರೆ ನಮ್ಮ ಮತ ಪ್ರಮಾಣ ಹೆಚ್ಚಾಗಿದೆ. ಬಿಜೆಪಿ ಮತ ಪ್ರಮಾಣ ಶೇ. 5 ಕುಸಿದಿದೆ. ಜೆಡಿಎಸ್‌ ಜತೆ ಹೊಂದಾಣಿಕೆ ಬಳಿಕವೂ ಅವರ ಮತ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೆಡಿಎಸ್‌ 2019ಕ್ಕಿಂತ ಕಡಿಮೆ ಪ್ರಮಾಣದ ಮತ ಪಡೆದಿದೆ. ಆದರೂ ನಾವು ನಿರೀಕ್ಷಿತ ಪ್ರಮಾಣದಲ್ಲಿ ಸೀಟು ಗೆದ್ದಿಲ್ಲ ಎಂದರು.

ರಾಷ್ಟ್ರಮಟ್ಟದಲ್ಲಿ ಬಿಜೆಪಿ ಸೋಲು: ಮೋದಿ ಯವರು ಚುನಾವಣೆ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ಅನ್ಯಧರ್ಮೀಯರ ವಿರುದ್ಧ ಭಾಷಣ ಮಾಡಿದರು. ಹಿಂದುಳಿದವರ ಮೀಸಲಾತಿ ಕಾಂಗ್ರೆಸ್‌ ಕಿತ್ತುಕೊಳ್ಳುತ್ತದೆ ಎಂದು ಹೇಳಿದರೂ ಮತ ದೊರೆಯಲಿಲ್ಲ. ಕಳೆದ ಬಾರಿಗಿಂತ 64 ಸ್ಥಾನ ಕುಸಿದಿದೆ. ಇದು ರಾಷ್ಟ್ರಮಟ್ಟದಲ್ಲಿ ಬಿಜೆಪಿ ಸೋಲು ಎಂದು ವ್ಯಾಖ್ಯಾನಿಸಿದರು.

ಅಯೋಧ್ಯೆಯಲ್ಲೇ ಸೋಲು
ಈ ಸೋಲಿನ ಕಾರಣದಿಂದ ಮೋದಿಯವರಿಗೆ ಮತ್ತೆ ಪ್ರಧಾನಿ ಆಗುವ ನೈತಿಕ ಹಕ್ಕಿಲ್ಲ. ವಿರೋಧ ಪಕ್ಷದ ನಾಯಕರು, ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿದರು. ಇಡಿ,ಐಟಿ,ಸಿಬಿಐ ಹೆಸರಲ್ಲಿ ಬೆದರಿಸಿದರು. ಆದರೂ ದೇಶದ ಜನ ಬಿಜೆಪಿಗೆ ಬಹುಮತ ಕೊಡಲಿಲ್ಲ. ರಾಮ ಮಂದಿರದ ಹೆಸರಲ್ಲಿ ಅಯೋಧ್ಯೆಯಲ್ಲೂ ಬಿಜೆಪಿ ಸೋತಿದೆ. ಇದು ಬಿಜೆಪಿಯ ಸೋಲು ಎಂದರು.

Advertisement

ದೇಶ ಒಪ್ಪಿಕೊಂಡಿದೆ: ರಾಹುಲ್‌ ಗಾಂಧಿ 2 ಯಾತ್ರೆಗಳು ಫ‌ಲ ನೀಡಿವೆ. ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿಯವರನ್ನು ದೇಶದ ಜನ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್‌ ಗಾಂಧಿ ಗೆದ್ದಿ¨ªಾರೆ. ಅವರಿಗೆ ಅಭಿನಂದಿಸುತ್ತೇನೆ. ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್‌ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ಶ್ರಮಿಸಿದ್ದಾರೆ ಎಂದು ವಿಶ್ಲೇಷಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆ ಗಳ ಪರಿಣಾಮ ಏನಾಗಿದೆ ಎನ್ನುವ ಬಗ್ಗೆ ವಿಶ್ಲೇಷಣೆ ನಡೆಯಬೇಕಿದೆ. ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದ್ದರೂ ಬಿಜೆಪಿ ಮತ ಪ್ರಮಾಣ ಕುಸಿದಿದೆ. ಕಾಂಗ್ರೆಸ್‌ ಕಡಿಮೆ ಸೀಟು ಗೆದ್ದರೂ ಮತ ಪ್ರಮಾಣ ಹೆಚ್ಚಾಗಿದೆ.
-ಸಿದ್ದರಾಮಯ್ಯ, ಸಿಎಂ

 

Advertisement

Udayavani is now on Telegram. Click here to join our channel and stay updated with the latest news.

Next