Advertisement
ಗುರುವಾರ ಜಿಲ್ಲೆಯ ದೇವರಹಿಪ್ಪರಗಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆಯ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ರಾಜ್ಯ ಭೇಟಿ ಖೋ ಖೋ ಕ್ರೀಡೆಯಂತಾಗಿದೆ. ಬರ್ತಾರೆ, ಹೋಗ್ತಾರೆ. ಲಗೋರಿ ಆಟನಾ, ಖೋ ಖೋ ಆಟನಾ ಎಂದು ತಿಳಿಯದಾಗಿದೆ ಎಂದರು.
ವಿಜಯಪುರ ಜಿಲ್ಲೆಯಲ್ಲಿ ನೀರಿದೆ, ಒಣಭೂಮಿ ಪ್ರದೇಶವಿದೆ. ಕೆಲಸ ಮಾಡದೇ ಬಂದ್ರೆ ಜನ ಮೆಚ್ಚಿಕೊಳ್ಳುತ್ತಾರಾ ಎಂದು ಪ್ರಶ್ನಿಸಿ, ಕರ್ನಾಟಕದ ಜನತೆ ಬಹಳ ಬುದ್ಧಿವಂತರಿದ್ದಾರೆ ಎಂದರು. ಜನ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಬೇಸತ್ತು ಹೋಗಿದ್ದಾರೆ. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ತರಬೇಕೆಂದು ಜನರಲ್ಲಿ ಅಂಡರ್ ಕರೆಂಟ್ ಪಾಸ್ ಆಗ್ತಿದೆ. ಪಂಚರತ್ನ ಯಾತ್ರೆಯಲ್ಲಿ ಈ ಅಂಶ ಕಂಡುಬಂದಿದೆ ಎಂದರು.