Advertisement

ಮೋದಿ ಭೇಟಿ ಜನತೆ ಮೇಲೆ ಪರಿಣಾಮ ಬೀರಿಲ್ಲ: ಖರ್ಗೆ

06:15 AM Feb 11, 2018 | Team Udayavani |

ಹೊಸಪೇಟೆ: ಬಿಜೆಪಿಯವರು ಕರ್ನಾಟಕವನ್ನು ಕಾಂಗ್ರೆಸ್‌ ಮುಕ್ತ ರಾಜ್ಯವನ್ನಾಗಿಸುವುದಾಗಿ ಹೇಳುತ್ತಿದ್ದಾರೆ. ಆದರೆ, ಇತ್ತೀಚೆಗೆ ಪ್ರಧಾನಿ ಹಾಗೂ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಈವರೆಗೆ ನಡೆಸಿದ ಯಾತ್ರಾ ಕಾರ್ಯಕ್ರಮಗಳು ರಾಜ್ಯದ ಜನತೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಲೋಕಸಭೆಯ ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

Advertisement

ನಗರದ ತಾಲೂಕು ಕ್ರೀಡಾಂಗಣದಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ದಿಂದ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ನೋಟ್‌ ರದ್ದತಿಯಿಂದ ಸಣ್ಣ ವ್ಯಾಪಾರಸ್ಥರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ  ಒಳಗಾದರು.  ಬಡವರಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಒಂದೊಂದಾಗಿ ಕಿತ್ತು ಕೊಳ್ಳಲಾಗುತ್ತಿದೆ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next